ಅವಿನಾಶ್
ಭದ್ರಾವತಿ, ಡಿ. ೧೩: ಹಲವಾರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ನಗರದ ನಿವಾಸಿ ಅವಿನಾಶ್‌ರವರನ್ನು ರಾಜ್ಯ ಬಿಜೆಪಿ ಮಾಧ್ಯಮ ವಿಭಾಗದ ರಾಜ್ಯ ಸಮಿತಿ ಸದಸ್ಯರನ್ನಾಗಿ ನೇಮಕಗೊಳಿಸಲಾಗಿದೆ.
ಎಂಬಿಎ ಪದವಿಧರರಾಗಿರುವ ಅವಿನಾಶ್ ಸಾಮಾಜಿಕ ಜಾಲತಾಣಗಳ ನಿರ್ವಹಣೆಯಲ್ಲೂ ಹೆಚ್ಚಿನ ಅನುಭವ ಹೊಂದಿದ್ದು, ಈಗಾಗಲೇ ಶಿವಮೊಗ್ಗ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇದೀಗ ರಾಜ್ಯ ಮಾಧ್ಯಮ ವಿಭಾಗದ ರಾಜ್ಯ ಸಮಿತಿ ಸದಸ್ಯರನ್ನಾಗಿ ಸಂಚಾಲಕ ಕರುಣಾಕರ ಖಾಸಲೆ ಹಾಗು ಸಹ ಸಂಚಾಲಕ ರಾಘವೇಂದ್ರ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಅವಿನಾಶ್‌ರವರಿಗೆ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ವಿವಿಧ ಮೋರ್ಚಾ, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.
No comments:
Post a Comment