ವಕೀಲರ ಸಂಘಕ್ಕೆ ಕರ್ನಾಟಕ ಜನಪರ ವೇದಿಕೆ ಮನವಿ
ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿರುವ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಪರವಾಗಿ ಯಾರು ಸಹ ವಕಾಲತ್ತು ವಹಿಸಬಾರದೆಂದು ಆಗ್ರಹಿಸಿ ತಾಲೂಕು ವಕೀಲರ ಸಂಘಕ್ಕೆ ಭದ್ರಾವತಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಡಿ. ೧೧: ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿರುವ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಪರವಾಗಿ ಯಾರು ಸಹ ವಕಾಲತ್ತು ವಹಿಸಬಾರದೆಂದು ಆಗ್ರಹಿಸಿ ತಾಲೂಕು ವಕೀಲರ ಸಂಘಕ್ಕೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಆಸ್ಪತ್ರೆಯ ಗುತ್ತಿಗೆ ಕಾರ್ಮಿಕ ಹಾಗು ಆತನ ಸ್ನೇಹಿತರು ಸೇರಿ ನಡೆಸಿರುವ ಅತ್ಯಾಚಾರ ಘಟನೆಯನ್ನು ಜನಪರ ವೇದಿಕೆ ಖಂಡಿಸುತ್ತದೆ. ಈ ಘಟನೆ ಪ್ರಜ್ಞಾವಂತ ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಈ ರೀತಿಯ ಘಟನೆಗಳು ಪುನಃ ಮರುಕಳುಹಿಸಬಾರದು. ಬಾಲಕಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ನ್ಯಾಯವಾದಿಗಳು ಮುಂದಾಗಬೇಕು. ಆರೋಪಿಗಳ ಪರವಾಗಿ ಯಾರು ಸಹ ವಕಾಲತ್ತು ವಹಿಸಬಾರದೆಂದು ಮನವಿ ಮಾಡಲಾಯಿತು.
ಸಂಘದ ಅಧ್ಯಕ್ಷ ವಿ. ವೆಂಕಟೇಶ್ ಮನವಿ ಸ್ವೀಕರಿಸಿದರು. ಜನಪರ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಸ್ ಭೈರಪ್ಪ ನೇತೃತ್ವ ವಹಿಸಿದ್ದರು. ಜಿಲ್ಲಾ ಕಾರ್ಯಾಧ್ಯಕ್ಷ ಸುದೀಪ್‌ಕುಮಾರ್, ಮುಖಂಡರಾದ ಮುಕುಂದಪ್ಪ, ಡಿ. ನರಸಿಂಹಮೂರ್ತಿ, ಪ್ರಾನ್ಸಿಸ್, ಅಬಿದ್, ಕಾಂತರಾಜ್, ಜೋಸೆಫ್, ಪ್ರಸನ್ನಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment