ಭದ್ರಾವತಿ, ಡಿ. ೨: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಗೆ ಸಂಬಂಧಿಸಿದ ೩ ರೈತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಚಳುವಳಿ ಬೆಂಬಲಿಸಿ ಡಿ.೩ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ರಂಗಪ್ಪ ವೃತ್ತದಲ್ಲಿ ಶಿವಮೊಗ್ಗ ಜಿಲ್ಲಾ ರೈತ ಸಂಘ ಹಸಿರು ಸೇನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರೈತರು, ಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್ ಕೋರಿದ್ದಾರೆ. .
No comments:
Post a Comment