Monday, December 7, 2020

ಬಾಲಕಿ ಮೇಲೆ ಅತ್ಯಚಾರ ಎಸಗಿ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ

ಬಂಜಾರ ಯುವಕರ ಸಂಘದಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ಹುರುಗಲುವಾಡಿಯಲ್ಲಿ ವಲಸೆ ಕಾರ್ಮಿಕ ಕುಟುಂಬದ ೧೨ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಹಾಗೂ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾವತಿ ತಾಲ್ಲೂಕು ಬಂಜಾರ ಯುವಕರ ಸಂಘ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಡಿ. ೭: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ಹುರುಗಲುವಾಡಿಯಲ್ಲಿ ವಲಸೆ ಕಾರ್ಮಿಕ ಕುಟುಂಬದ ೧೨  ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಹಾಗೂ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲ್ಲೂಕು ಬಂಜಾರ ಯುವಕರ ಸಂಘ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ತಾಳೆಬಸವಾಪುರ ತಾಂಡದ ದಿವಂಗತ ಪಾಂಡುನಾಯ್ಕ ಶಕುಂತಲ ಬಾಯಿ ದಂಪತಿಯ ಪುತ್ರಿ ಹೊಟ್ಟೆಪಾಡಿಗಾಗಿ ಕೂಲಿ ಕೆಲಸಕ್ಕೆ ಕಬ್ಬು ಕಡಿಯಲು ಹೋಗಿದ್ದಾಗ ಆಅತ್ಯಾಚಾರವೆಸಗಿ ಭೀಕರವಾಗಿ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಬಾಲಕಿಯ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡುವ ಜೊತೆಗೆ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಲಾಯಿತು.   
      ಬಂಜಾರ ಸಮಾಜದ ಸ್ವಾಮೀಜಿಗಳ ನೇತೃತ್ವದಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ  ಕೃಷ್ಣನಾಯ್ಕ, ಪ್ರಮುಖರಾದ ಬಿ. ಪ್ರವೀಣ್ ಕುಮಾರ್, ರವಿನಾಯ್ಕ, ಕೇಶವನಾಯ್ಕ, ಚಂದ್ರನಾಯ್ಕ, ಕುಮಾರ್ ನಾಯ್ಕ, ನಿತಿನ್ ನಾಯ್ಕ, ಸೋಮನಾಯ್ಕ, ರಮೇಶ್ ನಾಯ್ಕ, ಟಿ ಚಂದ್ರೇಗೌಡ, ಎಚ್ ರವಿಕುಮಾರ್, ಬಿ.ವಿ ಗಿರೀಶ್, ಶಶಿಕುಮಾರ್ ಎಸ್ ಗೌಡ, ಸತೀಶ್ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment