ಭದ್ರಾವತಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಿವೃತ್ತ ಪಶು ವೈದ್ಯ ಡಾ. ಜಿ.ಎಂ. ನಟರಾಜ್‌ರವರ ಸಹಕಾರದೊಂದಿಗೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸೊಮವಾರ ಹಮ್ಮಿಕೊಳ್ಳಲಾಗಿದ್ದ ಶಿವಲಿಂಗಮ್ಮ ಡಾ. ಜಿ.ಎಂ ಮುರುಗೇಂದ್ರಯ್ಯ ದತ್ತಿ ಕಾರ್ಯಕ್ರಮವನ್ನು ಪ್ರಾಂಶುಪಾಲ ಡಾ. ಜಿ.ಎಫ್ ಕುಟ್ರಿ ಉದ್ಘಾಟಿಸಿದರು.
ಭದ್ರಾವತಿ, ಡಿ. ೧೪: ೧೨ನೇ ಶತಮಾನದ ವಚನ ಸಾಹಿತ್ಯ ಧರ್ಮ, ಜಾತಿ, ಲಿಂಗಬೇಧ ಸೇರಿದಂತೆ ಸಮಾಜದಲ್ಲಿನ ಎಲ್ಲಾ ರೀತಿಯ ಅಸಮಾನತೆಗಳ ವಿರುದ್ಧದ ಹೋರಾಟದ ಪರಿಕಲ್ಪನೆಯಾಗಿದೆ ಎಂದು ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕ ಎಂ. ದಿವಾಕರ್ ಹೇಳಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಿವೃತ್ತ ಪಶು ವೈದ್ಯ ಡಾ. ಜಿ.ಎಂ. ನಟರಾಜ್‌ರವರ ಸಹಕಾರದೊಂದಿಗೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸೊಮವಾರ ಹಮ್ಮಿಕೊಳ್ಳಲಾಗಿದ್ದ ಶಿವಲಿಂಗಮ್ಮ ಡಾ. ಜಿ.ಎಂ ಮುರುಗೇಂದ್ರಯ್ಯ ದತ್ತಿ ಕಾರ್ಯಕ್ರಮದಲ್ಲಿ ಅವರು ಸಾಹಿತ್ಯ ಮತ್ತು ಸಾಮಾಜಿಕ ನ್ಯಾಯ ಕುರಿತು ಉಪನ್ಯಾಸ ನೀಡಿದರು.
೧೨ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣ, ಅಕ್ಕಮಹಾದೇವಿ ಸೇರಿದಂತೆ ಅನೇಕ ವಚನಗಾರರು ಅಂದಿನ ವಾಸ್ತವಿಕ ಬದುಕನ್ನು ತಮ್ಮ ವಚನಗಳಲ್ಲಿ ತಿಳಿಸಿದ್ದಾರೆ. ಅನುಭವ ಮಂಟಪದ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಗಳನ್ನು ತೋರಿಸಿ ಕೊಟ್ಟಿದ್ದಾರೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಫ್ ಕುಟ್ರಿ ಮಾತನಾಡಿ, ನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಕನ್ನಡ ಸಾಹಿತ್ಯ, ಭಾಷೆ , ಸಂಸ್ಕೃತಿ ಉಳಿಯಬೇಕಾಗಿದೆ. ಪ್ರಸ್ತುತ ನಾವುಗಳು ಕನ್ನಡದಲ್ಲಿ ಮಾತನಾಡಲು ನಿರಾಸಕ್ತಿ ತೋರಿಸುತ್ತಿದ್ದೇವೆ. ಸಾಹಿತ್ಯದಿಂದ ಭಾಷೆಯ ಬೆಳವಣಿಗೆ ಸಾಧ್ಯ. ಸಾಹಿತ್ಯಕ್ಕೆ ಅಪಾರವಾದ ಶಕ್ತಿ ಇದೆ ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪಶುವೈದ್ಯ ಡಾ. ಜಿ.ಎಂ ನಟರಾಜ್, ಉಪ ಪ್ರಾಂಶುಪಾಲರಾದ ಟಿ.ಎಸ್ ಸುಮನ, ಅಧ್ಯಾಪಕ ಎಂ.ಬಿ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಸಾಪ ಕಾರ್ಯದರ್ಶಿ ಚನ್ನಪ್ಪ ಆಶಯ ನುಡಿಗಳನ್ನಾಡಿದರು., ಕಾರ್ಯದರ್ಶಿ ವೈ.ಕೆ ಹನುಮಂತಯ್ಯ, ಎ. ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment