ಭದ್ರಾವತಿ, ಡಿ. ೧೨: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಿವೃತ್ತ ಪಶು ವೈದ್ಯ ಡಾ. ಜಿ.ಎಂ. ನಟರಾಜ್‌ರವರ ಸಹಕಾರದೊಂದಿಗೆ ಶಿವಲಿಂಗಮ್ಮ ಡಾ. ಜಿ.ಎಂ ಮುರುಗೇಂದ್ರಯ್ಯ ದತ್ತಿ ಕಾರ್ಯಕ್ರಮ ಡಿ.೧೪ರ ಬೆಳಿಗ್ಗೆ ೧೦.೩೦ಕ್ಕೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಫ್ ಕುಟ್ರಿ ಉದ್ಘಾಟಿಸಲಿದ್ದು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕ ಎಂ. ದಿವಾಕರ್ ಸಾಹಿತ್ಯ ಮತ್ತು ಸಾಮಾಜಿಕ ನ್ಯಾಯ ಕುರಿತು ಉಪನ್ಯಾಸ ನೀಡಲಿದ್ದಾರೆ.
ಡಾ. ಜಿ.ಎಂ ನಟರಾಜ್, ಉಪ ಪ್ರಾಂಶುಪಾಲರಾದ ಟಿ.ಎಸ್ ಸುಮನ, ಅಧ್ಯಾಪಕ ಎಂ.ಬಿ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಕಸಾಪ ಕಾರ್ಯದರ್ಶಿ ಚನ್ನಪ್ಪ ಆಶಯ ನುಡಿಗಳನ್ನಾಡಲಿದ್ದು, ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಕಾರ್ಯದರ್ಶಿ ವೈ.ಕೆ ಹನುಮಂತಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
No comments:
Post a Comment