ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹ
ಭದ್ರಾವತಿ ಹುತ್ತಾ ಬಸ್ ನಿಲ್ದಾಣದ ಮುಂಭಾಗ ಜಾಥಾಕ್ಕೆ ಒಕ್ಕೂಟದ ಅಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಡಿ ಸಿ ಮಾಯಣ್ಣ ಚಾಲನೆ ನೀಡಿದರು
ಭದ್ರಾವತಿ, ಡಿ. ೮: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಭಾರತ್ ಬಂದ್ ಹಿನ್ನಲೆಯಲ್ಲಿ ನಗರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಾಥಾ ನಡೆಸಲಾಯಿತು.
ಹುತ್ತಾಕಾಲೋನಿ ಬಸ್ ನಿಲ್ದಾಣದ ಮುಂಭಾಗ ಜಾಥಾಕ್ಕೆ ಒಕ್ಕೂಟದ ಅಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಡಿ ಸಿ ಮಾಯಣ್ಣ ಚಾಲನೆ ನೀಡಿದರು. ರೈತರು ಮುಖಂಡರು ಮಾತನಾಡಿ, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರೈತ ಹಾಗು ದಲಿತ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ. ಇದರ ವಿರುದ್ಧ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.
ಜಾಥಾ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತ, ಮಾಧವಚಾರ್ ವೃತ್ತ ಹಾಗು ರಂಗಪ್ಪ ವೃತ್ತ ಮೂಲಕ ತಾಲೂಕು ಕಛೇರಿ ತಲುಪಿತು. ತಹಸೀಲ್ದಾರ್ ಮೂಲಕ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಶಿವಮೊಗ್ಗ ಜಿಲ್ಲಾ ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ತಾಲೂಕು ಘಟಕ ಹಾಗು ಜಿಲ್ಲಾ ಮಹಿಳಾ ಘಟಕ, ದಲಿತ ಸಂಘರ್ಷ ಸಮಿತಿ, ಬಿಸಿಯೂಟ ನೌಕರರ ಸಂಘ, ಬ್ಲಾಕ್ ಕಾಂಗ್ರೆಸ್ ಸಮಿತಿ, ಜ್ಯಾತ್ಯತೀತ ಜನಾತದಳ, ಆಮ್ ಆದ್ಮಿ ಪಾರ್ಟಿ, ಕರ್ನಾಟಕ ಕೋಮು ಸೌಹಾರ್ದ ವೇದಿಕೆ, ಜನಶಕ್ತಿ, ಛಲವಾದಿ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳು ಪ್ರಗತಿಪರ ಸಂಘಟನೆಗಳ ಒಕ್ಕೂಟದೊಂದಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದವು.
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಭಾರತ್ ಬಂದ್ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಾಥಾ ನಡೆಸಲಾಯಿತು.
ರೈತ ಮುಖಂಡರಾದ ಕೆ.ಟಿ ಗಂಗಾಧರ್, ಎಚ್ ಆರ್ ಬಸವರಾಜಪ್ಪ, ಯಶವಂತರಾವ್ ಘೋರ್ಪಡೆ, ಡಿ.ವಿ ವೀರೇಶ್, ರಾಮಚಂದ್ರರಾವ್, ಹಿರಿಯಣ್ಣಯ್ಯ, ಶರತ್ಚಂದ್ರ, ಮೋಹನ್, ವಸಂತ್, ಕೋಮು ಸೌಹಾರ್ದ ವೇದಿಕೆಯ ಕೆ.ಎಲ್ ಅಶೋಕ್, ರಾಜೇಂದ್ರ, ಪ್ರೊ. ಎಂ. ಚಂದ್ರಶೇಖರಯ್ಯ, ಪೇಪರ್ ಸುರೇಶ್, ಜಿ. ರಾಜು, ಕರ್ನಾಟಕ ಜನಸೈನ್ಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾರದಮ್ಮ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್, ಅನಿತಾ, ಶಾರದ, ಮಹೇಶ್ವರಿ, ಪದ್ಮಮ್ಮ, ಸುಮಿತ್ರಾ, ಹೇಮಾ, ಸೌಮ್ಯ, ಶಾರದಕುಮಾರಿ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್, ರವಿಕುಮಾರ್, ಉಮೇಶ್, ದಿಲೀಪ್, ತರುಣ್, ಲೋಕೇಶ್, ಕುಮಾರ್, ರಾಮಕೃಷ್ಣ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಸತ್ಯ, ಚಿನ್ನಯ್ಯ, ಕಾಣಿಕ್‌ರಾಜ್, ರಂಗನಾಥ್, ಹಾಲೇಶಪ್ಪ, ಪಳನಿ, ಕುಬೇಂದ್ರಪ್ಪ, ಆಮ್‌ಆದ್ಮಿ ಪಾರ್ಟಿ ಪ್ರಮುಖರಾದ ಜೋಸೆಫ್, ಮುಳ್ಕೆರೆ ಲೋಕೇಶ್, ಪರಮೇಶ್ವರಚಾರ್, ಎಚ್. ರವಿಕುಮಾರ್, ವಿನೋದ್, ಪರಮೇಶ್‌ನಾಯ್ಕ್, ಜೋಸೆಫ್, ಇಬ್ರಾಹಿಂ ಖಾನ್, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಈರಣ್ಣ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.
No comments:
Post a Comment