ಭದ್ರಾವತಿ ಖಲಂದರ್ ನಗರದ ನಿವಾಸಿ ಜಹರ ಹರ್ಮೈನ್ ವೈದ್ಯಕೀಯ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡರು.
ಭದ್ರಾವತಿ, ಡಿ. ೪: ನಗರಸಭೆ ವ್ಯಾಪ್ತಿಯ ಖಲಂದರ್ ನಗರದ ನಿವಾಸಿ ಜಹರ ಹರ್ಮೈನ್ ವೈದ್ಯಕೀಯ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.
ಓರಲ್ ಅಂಡ್ ಮ್ಯಾಕ್ಸಿಲೊಫೇಶಿಯಲ್ ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ ಮೊದಲಸ್ಥಾನ ಕಾಯ್ದುಕೊಂಡಿದ್ದಾರೆ. ಇವರು ನಗರದ ಹಫೀಸಿಯ ಮಸೀದಿ ಮತ್ತು ಉಸ್ಮಾನಿಯಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಬೀಬುಲ್ಲಾ ಖಾನ್(ನಾಸಿರ್‌ಖಾನ್) ಪುತ್ರಿಯಾಗಿದ್ದಾರೆ. ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಇವರನ್ನು ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.
No comments:
Post a Comment