ಭದ್ರಾವತಿ ಒಕ್ಕಲಿಗರ ನಿರ್ದೇಶಕರ ಚುನಾವಣೆಗೆ ೩ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಶಶಿಕುಮಾರ್ ಎಸ್. ಗೌಡ ಸ್ಪರ್ಧಿಸಿದ್ದು, ಚುನಾವಣಾಧಿಕಾರಿಗಲಿಗೆ ನಾಮಪತ್ರ ಸಲ್ಲಿಸಿದರು.
ಭದ್ರಾವತಿ, ಡಿ. ೧೧: ಹಲವಾರು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ತಮಗೆ ಒಕ್ಕಲಿಗ ಸಮಾಜದೊಂದಿಗೆ ಇನ್ನೂ ಹೆಚ್ಚಿನ ಬಾಂಧವ್ಯ ಹೊಂದಲು ಈ ಬಾರಿ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಶಶಿಕುಮಾರ್ ಎಸ್ ಗೌಡ ತಿಳಿಸಿದರು.
ಅವರು ಒಕ್ಕಲಿಗರ ಸಮಾಜದ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿ, ಈ ಹಿಂದೆ ಲೋಕಸಭಾ ಚುನಾವಣೆಗೆ ೩ ಬಾರಿ ಸ್ಪರ್ಧಿಸಿದ್ದು, ೧ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಎಲ್ಲಾ ರೀತಿಯ ಹೋರಾಟಗಳಲ್ಲೂ ಭಾಗಿಯಾಗಿದ್ದು, ಎಲ್ಲಾ ಸಮುದಾಯಗಳ ನಡುವೆ ಗುರಿತಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಹೋರಾಟ ನಡೆಸಲು ನಿರ್ದೇಶಕ ಸ್ಥಾನ ಸಹಕಾರಿಯಾಗಲಿದೆ ಎಂಬ ನಿರೀಕ್ಷೆಯೊಂದಿಗೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಪ್ರಸ್ತುತ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇನೆ ಎಂದರು. ಕರ್ನಾಟಕ ರಕ್ಷಣಾ ವೇದಿಕೆಯ ಸಂದೇಶ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment