ಜಯಕರ್ನಾಟಕ ಜನಪರ ವೇದಿಕೆ ಮೂಲಕ ತಹಸೀಲ್ದಾರ್‌ಗೆ ಮನವಿ
ಭದ್ರಾವತಿ ತಾಲೂಕಿನ ಕೊರಲಕೊಪ್ಪ ಗ್ರಾಮ ಪಂಚಾಯಿತಿ ಹಾಲಿ ಸದಸ್ಯೆಯೊಬ್ಬರ ಹೆಸರನ್ನು ರಾಜಕೀಯ ದುರುದ್ದೇಶದಿಂದ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ತಾಲೂಕು ಕಛೇರಿ ಮುಂಭಾಗ ಸೋಮವಾರ ಪತ್ರಿಭಟನೆ ನಡೆಸಲಾಯಿತು.
ಭದ್ರಾವತಿ, ಡಿ. ೭: ತಾಲೂಕಿನ ಕೊರಲಕೊಪ್ಪ ಗ್ರಾಮ ಪಂಚಾಯಿತಿ ಹಾಲಿ ಸದಸ್ಯೆಯೊಬ್ಬರ ಹೆಸರನ್ನು ರಾಜಕೀಯ ದುರುದ್ದೇಶದಿಂದ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ತಾಲೂಕು ಕಛೇರಿ ಮುಂಭಾಗ ಸೋಮವಾರ ಪತ್ರಿಭಟನೆ ನಡೆಸಲಾಯಿತು.
ಈ ಬಾರಿ ಚುನಾವಣೆಗೆ ಸ್ಪರ್ಧಿಸಬಾರದೆಂಬ ದುರುದ್ದೇಶದಿಂದ ಹಾಲಿ ಸದಸ್ಯೆ ಬಿ.ಆರ್ ಸಿಂಧುರವರ ಹೆಸರನ್ನು ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಟ್ಟು ನಗರ ವ್ಯಾಪ್ತಿಗೆ ಸೇರಿಸಲಾಗಿದೆ. ಕೀಳುಮಟ್ಟದ ಕುತಂತ್ರ ರಾಜಕಾರಣದ ಅಮಿಷಕ್ಕೆ ಬಲಿಯಾಗಿ ಬಿಎಲ್‌ಓ ಹಾಗು ಸಂಬಂಧಪಟ್ಟ ಅಧಿಕಾರಿಗಳು ಈ ಕೃತ್ಯನಡೆಸಿದ್ದಾರೆಂದು ಆರೋಪಿಸಲಾಯಿತು.
ಇಂದೊಂದು ಸಂವಿಧಾನದ ಕಗ್ಗೊಲೆಯಾಗಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ ತಕ್ಷಣ ನಡೆದಿರುವ ತಪ್ಪನ್ನು ಸರಿಪಡಿಸಿ ಚುನಾವಣೆಗೆ ಸ್ಪಧಿಸಲು ಅವಕಾಶ ಕೊಡಬೇಕೆಂದು ಆಗ್ರಹಿಸಲಾಯಿತು.
ಜನಪರ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸುದೀಪ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಹುಲಗಿ ಕೃಷ್ಣ, ಕಾರ್ಯಾಧ್ಯಕ್ಷ ಮಹಮದ್ ಶಫಿ, ಅಬಿದ್, ಸದಸ್ಯೆ ಬಿ.ಅರ್ ಸಿಂಧು ಹಾಗು ಕೊರಲಕೊಪ್ಪ ಗ್ರಾಮಸ್ಥರು ಪಾಲ್ಗೊಂಡಿದ್ದರು.
No comments:
Post a Comment