ಭದ್ರಾವತಿ, ಡಿ. ೨: ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗು ಬ್ಲಾಕ್ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ವತಿಯಿಂದ ಡಿ.೩ರಂದು ಬೆಳಿಗ್ಗೆ ೯ ಗಂಟೆಗೆ ಹಳೇನಗರದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
೬ ರಿಂದ ೧೬ ವರ್ಷ ವಯೋಮಾನದ (೧ ರಿಂದ ೧೦ನೇ ತರಗತಿ) ವಿಕಲಚೇತನ ಮಕ್ಕಳಿಗೆ ಕ್ರೀಡಾಕೂಟ ಮತ್ತು ಸಾಂಸ್ಕರತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ೧ ರಿಂದ ೫ನೇ ತರಗತಿ ಮಕ್ಕಳಿಗೆ ಕಪ್ಪೆ ಓಟ ಮತ್ತು ೧೦೦ ಮೀ. ಓಟ, ೬ ರಿಂದ ೧೦ನೇ ತರಗತಿ ಮಕ್ಕಳಿಗೆ ಮಡಿಕೆ ಒಡೆಯುವುದು, ಮ್ಯೂಸಿಕಲ್ ಚೇರ್, ಚಮಚದಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ಹಲ್ಲಿನಲ್ಲಿ ಕಚ್ಚಿಕೊಂಡು ಓಡುವ ಕ್ರೀಡಾ ಸ್ಪರ್ಧೆಗಳನ್ನು ಹಾಗು ೧ ರಿಂದ ೫ನೇ ತರಗತಿ ಮಕ್ಕಳಿಗೆ ಛದ್ಮ ವೇಷ, ದೇಶ ಭಕ್ತಿ ಗೀತೆ, ೬ ರಿಂದ ೧೦ನೇ ತರಗತಿ ಮಕ್ಕಳಿಗೆ ಜಾನಪದ ಗೀತೆ, ಚಿತ್ರಕಲೆ ಮತ್ತು ಆಶುಭಾಷಣೆ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಲ್ಲದೆ ವಿಕಲಚೇತನ ಮಕ್ಕಳ ಪೋಷಕರಿಗೂ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಕೋವಿಡ್-೧೯ರ ಹಿನ್ನಲೆಯಲ್ಲಿ ನಗರ ಪ್ರದೇಶ ವ್ಯಾಪ್ತಿಯ ವಿಕಲಚೇತನ ಮಕ್ಕಳು ಮಾತ್ರ ಭಾಗವಹಿಸಹುದಾಗಿದೆ. ಉಳಿದಂತೆ ಗ್ರಾಮಾಂತರ ಭಾಗದ ಮಕ್ಕಳಿಗೆ ಆಯಾ ಶಾಲೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
No comments:
Post a Comment