ಭದ್ರಾವತಿ ಕ್ಷೇತ್ರದಲ್ಲಿ ೩ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಎಲ್ಲಾ ಧರ್ಮ, ಜಾತಿ, ಜನಾಂಗದವರೊಂದಿಗೆ ಗುರುತಿಸಿಕೊಂಡಿರುವ ಬಿ.ಕೆ ಸಂಗಮೇಶ್ವರ್‌ರವರ ರಾಜಕೀಯ ಸೇವೆಯನ್ನು ಪರಿಗಣಿಸಿ ಕನಕಶ್ರೀ ಚೇತನ ಪತಂಜಲಿ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಭದ್ರಾವತಿ, ಡಿ. ೩: ಕ್ಷೇತ್ರದಲ್ಲಿ ೩ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಎಲ್ಲಾ ಧರ್ಮ, ಜಾತಿ, ಜನಾಂಗದವರೊಂದಿಗೆ ಗುರುತಿಸಿಕೊಂಡಿರುವ ಬಿ.ಕೆ ಸಂಗಮೇಶ್ವರ್‌ರವರ ರಾಜಕೀಯ ಸೇವೆಯನ್ನು ಪರಿಗಣಿಸಿ ಕನಕಶ್ರೀ ಚೇತನ ಪತಂಜಲಿ ರತ್ನ ಪ್ರಶಸ್ತಿ ನೀಡಲಾಗಿದೆ.
ಶಿವಮೊಗ್ಗ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಮತ್ತು ನಗರದ ಕನಕ ಯುವಪಡೆ ವತಿಯಿಂದ ೫೩೩ನೇ ಶ್ರೀ ಕನಕದಾಸರ ಜಯಂತ್ಯೋತ್ಸವ ಮತ್ತು ೨೫ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮೋತ್ಸವದ ಅಂಗವಾಗಿ ರಾಜ್ಯಮಟ್ಟದ ಕನಕ ಕಥಾಕೀರ್ತನ ಮಹೋತ್ಸವ ಸಮ್ಮೇಳನ, ತರಬೇತಿ ಕಾರ್ಯಾಗಾರ ಹಾಗೂ ಕನಕದಾಸರ ಗೀತಾಗಾಯನ, ಹಾಲುಮತ ಸಂಸ್ಕೃತಿ, ಕನಕ ಕಲಾ ವೈಭವ, ಕನಕಶ್ರೀ ಚೇತನ ಪತಂಜಲಿ ರತ್ನ ಮತ್ತು ವಿಶ್ವಕನ್ನಡ ಕಣ್ಮಣಿ ರಾಜ್ಯ ಪ್ರಶಸ್ತಿ ಸಮಾರಂಭದಲ್ಲಿ ಶಾಸಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಕಾರ್ಯದರ್ಶಿ ಪತಂಜಲಿ ಜೆ ನಾಗರಾಜ್ ಹಾಗೂ ಕನಕ ಯುವ ಪಡೆ ಉಪಾಧ್ಯಕ್ಷ ಕೆ. ಕೇಶವ ಸೇರಿದಂತೆ ಇತರರು ಉಪಸ್ಥಿತರಿದ್ದರು.
No comments:
Post a Comment