ವಿದ್ಯುತ್ ದುರಸ್ತಿಯಲ್ಲಿ ತೊಡಗಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ವಿದ್ಯುತ್ ತಗುಲಿದ ಪರಿಣಾಮ ಕಂಬದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಭದ್ರಾವತಿ ತಾಲೂಕಿನ ಕಾಳನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಭದ್ರಾವತಿ, ಡಿ. ೨೧: ವಿದ್ಯುತ್ ದುರಸ್ತಿಯಲ್ಲಿ ತೊಡಗಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ವಿದ್ಯುತ್ ತಗುಲಿದ ಪರಿಣಾಮ ಕಂಬದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ತಾಲೂಕಿನ ಕಾಳನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಸುರೇಶ್(೨೧) ಎಂಬಾತ ಮೃತಪಟ್ಟಿದ್ದು, ಗ್ರಾಮದ ಸರ್ವೆ ನಂ.೬ರ ಅಣ್ಣಯ್ಯ ಎಂಬುವರ ಜಮೀನಿನ ಬೋರ್ವೆಲ್‌ಗೆ ಸಂಪರ್ಕಗೊಂಡಿದ್ದ ವಿದ್ಯುತ್ ಕಡಿತಗೊಂಡಿದ್ದು, ಈ ಹಿನ್ನಲೆಯಲ್ಲಿ ದುರಸ್ತಿ ಕಾರ್ಯ ಕೈಗೊಳ್ಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಕಂಬದಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
No comments:
Post a Comment