ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮನವಿ
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ಜಿಲ್ಲಾಧ್ಯಕ್ಷ ಮ.ಸ ನಂಜುಂಡಸ್ವಾಮಿಯವರ ವಿರುದ್ಧ ಸಾಮಾಜಿಕ ಜಾಲತಾಣ(ವಾಟ್ಸಪ್ ಗ್ರೂಪ್)ದಲ್ಲಿ ಹರಿದಾಡುತ್ತಿರುವ ಅವಹೇಳನಕಾರಿ ಸಂದೇಶ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಸಂಘದ ಭದ್ರಾವತಿ ತಾಲೂಕು ಶಾಖೆವತಿಯಿಂದ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ್ ಶಿವಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮೇ. ೧೯: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ಜಿಲ್ಲಾಧ್ಯಕ್ಷ ಮ.ಸ ನಂಜುಂಡಸ್ವಾಮಿಯವರ ವಿರುದ್ಧ ಸಾಮಾಜಿಕ ಜಾಲತಾಣ(ವಾಟ್ಸಪ್ ಗ್ರೂಪ್)ದಲ್ಲಿ ಹರಿದಾಡುತ್ತಿರುವ ಅವಹೇಳನಕಾರಿ ಸಂದೇಶ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಸಂಘದ ತಾಲೂಕು ಶಾಖೆವತಿಯಿಂದ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ್ ಶಿವಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷರಾದ ಮ.ಸ ನಂಜುಂಡಸ್ವಾಮಿಯವರು ನಿವೃತ್ತಿ ಹಂಚಿನಲ್ಲಿದ್ದರೂ ಸಹ ನೌಕರರ ಸಮಸ್ಯೆಗಳಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದು ಅವರ ಕರ್ತವ್ಯವಾಗಿದ್ದು, ಇದನ್ನು ಅರಿಯದ ಹಾಗೂ ಮಾ.ಸ ನಂಜುಂಡಸ್ವಾಮಿಯವರ ಹೋರಾಟದ ಪೂರ್ವಪರ ತಿಳಿಯದ ಸ್ವಾರ್ಥ ಮನೋಭಾವ ಹೊಂದಿರುವವರು ಅವರ ವಿರುದ್ಧ ಸತ್ಯಕ್ಕೆ ದೂರವಾದ ಸುಳ್ಳು ಸುದ್ದಿಗಳನ್ನು ವಾಯ್ಸ್ ಆಫ್ ಸಾಗರ ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಹರಡುವ ಮೂಲಕ ತೇಜೋವಧೆ ಮಾಡಿದ್ದು, ಇವರ ವಿರುದ್ಧ ಜಿಲ್ಲಾಡಳಿತ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.
ಸಂಘದ ತಾಲೂಕು ಶಾಖೆ ಅಧ್ಯಕ್ಷ ನೀಲೇಶ್‌ರಾಜ್, ಪ್ರಮುಖರಾದ ಮೋಹನ್, ಆರ್.ಎಸ್ ರವೀಂದ್ರಕುಮಾರ್, ಶ್ರೀಕಾಂತ್, ಹರೀಶ್, ಆಕಾಶ್, ನಾಗರಾಜ್, ರಾಧಮ್ಮ, ಇಸ್ತಿಯಾಕ್ ಆಲಿ ಅಹಮ್ಮದ್ ಖಾನ್, ರಮೇಶ್, ಶ್ರೀಕಾಂತ್ ಬೊಡ್ಕೆ, ಪ್ರಭಾಕರ್, ಪ್ರಕಾಶ್ ಮತ್ತು ಆಶಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.