Wednesday, August 5, 2020

ಶ್ರೀ ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ

ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಅಂಗವಾಗಿ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ  ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಕೈಗೊಳ್ಳಲಾಯಿತು.
ಭದ್ರಾವತಿ, ಆ. ೫:  ಹಳೇನಗರದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಬುಧವಾರ ಶ್ರೀ ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ ಜರುಗಿತು. 
ಬೆಳಿಗ್ಗೆ ಪಂಚಾಮೃತ ಅಭಿಷೇಕದೊಂದಿಗೆ ರಾಯರ ಬೃಂದಾವನ, ಮುಖ್ಯ ಪ್ರಾಣ ದೇವರಿಗೆ ಮತ್ತು ಶ್ರೀ ವಾದಿರಾಜರ ಬೃಂದಾವನಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ದೇವಸ್ಥಾನದ ಪ್ರಾಂಗಣದಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು.  
ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಅಂಗವಾಗಿ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ  ಬೃಂದಾವನಕ್ಕೆ ಪುಷ್ಪಾಲಂಕಾರ ಕೈಗೊಳ್ಳಲಾಯಿತು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸದ ಹಿನ್ನಲೆಯಲ್ಲಿ ಮಠದಲ್ಲಿ ಚಂಡೆವಾದ್ಯ ಸೇವೆ ನಡೆಸಿ ಜೈ ಶ್ರಿರಾಮ್ ಘೋಷಣೆ ಕೂಗುವ ಮೂಲಕ ಭಕ್ತರು ಸಂಭ್ರಮಿಸಿದರು. 
ವೇದಬ್ರಹ್ಮ ಗೋಪಾಲಚಾರ್, ಮಠದ ಪ್ರಮುಖರಾದ ಮುರಳೀಧರ ತಂತ್ರಿ, ರಮಾಕಾಂತ, ಸತ್ಯನಾರಾಂiiಣಾಚಾರ್, ನಿರಂಜನ್, ಶ್ರೀಪತಿ, ಮಾಧವರಾವ್, ಚೌತಾಯ್ ಗುರುರಾಜ್, ಜಯತೀರ್ಥ, ಸುಧೀಂದ್ರರಾವ್, ಶಶಿ, ಪ್ರಮೋದ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಭದ್ರಾವತಿ, ಆ. ೫: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಈ ಇಬ್ಬರು ರಾಜಕೀಯ ಪ್ರಮುಖರು ಸೇರಿದಂತೆ ಸೋಂಕಿಗೆ ಒಳಗಾಗಿರುವ ಎಲ್ಲರೂ ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ಬುಧವಾರ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. 
ಶಾಸಕ ಬಿ.ಕೆ.ಸಂಗಮೇಶ್ವರ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಉದಯ್‌ಕುಮಾರ್, ನಿರಂಜನ್, ಮುಖಂಡರಾದ ಬಿ.ಎಸ್ ಗಣೇಶ್, ಚನ್ನಪ್ಪ, ಫ್ರಾನ್ಸಿಸ್, ಶಿವಕುಮಾರ್, ರಾಮಕೃಷ್ಣೇ ಗೌಡ, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.. 

ರಾಮಮಂದಿರ ಶಿಲಾನ್ಯಾಸ : ಹಿಂದೂಪರ ಸಂಘಟನೆಗಳಿಂದ ಸಂಭ್ರಮಾಚರಣೆ

ಕರಸೇವಕರಿಗೆ ಸನ್ಮಾನ, ವಿವಿಧೆಡೆ ಸಿಹಿ ಹಂಚಿಕೆ 

ಭದ್ರಾವತಿಯಲ್ಲಿ ಕರಸೇವಕರ ತಂಡದ ಶ್ರಮ ಸಾರ್ಥಕತೆ ಮಿಲನ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ವಿಶ್ವ ಹಿಂದೂ ಪರಿಷತ್ ತಾಲೂಕು ಶಾಖೆ ವತಿಯಿಂದ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ಜರುಗಿತು. 
ಭದ್ರಾವತಿ, ಆ. ೫: ದೇಶದ ಬಹುಸಂಖ್ಯಾತರ ಬಹಳ ವರ್ಷಗಳ ಕನಸು ನನಸಾಗಿಸುವ ನಿಟ್ಟಿನಲ್ಲಿ ಶ್ರೀರಾಮ ಜನ್ಮಭೂಮಿ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇನ್ನಿತರ ಗಣ್ಯರು ಶಿಲಾನ್ಯಾಸ ನೆರವೇರಿಸಿದ ಹಿನ್ನಲೆಯಲ್ಲಿ ನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಸಂಭ್ರಮಾಚರಣೆ ನಡೆಸಲಾಯಿತು. 
ವಿವಿಧೆಡೆ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಅಲ್ಲದೆ ನಗರದ ಬಿಜೆಪಿ ಪಕ್ಷದ ತಾಲೂಕು ಎಸ್.ಸಿ ಮೋರ್ಚಾ ಬಜರಂಗದಳ, ಕೇಸರಿಪಡೆ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳಿಂದ ಸಿಹಿ ಹಂಚಲಾಯಿತು. 
ಕರ ಸೇವಕರಿಗೆ ಸನ್ಮಾನ : 
೧೯೯೨ರಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ನೇತೃತ್ವದಲ್ಲಿ ಸುಮಾರು ೮೮ ಕರಸೇವಕರು ಆಯೋಧ್ಯೆಗೆ ತೆರಳಿ ಕರ ಸೇವೆಯಲ್ಲಿ ಪಾಲ್ಗೊಂಡಿದ್ದರು. ಈ ಹಿನ್ನಲೆಯಲ್ಲಿ ಕರಸೇವಕರ ತಂಡದ ಶ್ರಮ ಸಾರ್ಥಕತೆ ಮಿಲನ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ವಿಶ್ವ ಹಿಂದೂ ಪರಿಷತ್ ತಾಲೂಕು ಶಾಖೆ ವತಿಯಿಂದ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ಜರುಗಿತು. 
ಶ್ರೀಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯಸ್ವಾಮಿ ದೇವಸ್ಥಾನದ ಶ್ರೀ ಮುರುಗೇಶ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಪ್ರಮುಖರಾದ  ರಾಘವೇಂದ್ರಚಾರ್, ಎಂ. ಪ್ರಭಾಕರ್, ಶಿವರಾಜ್, ಯಶೋಧ ವೀರಭದ್ರಪ್ಪ, ಜಿ. ಆನಂದಕುಮಾರ್, ಕೆ.ಎನ್ ಶ್ರೀಹರ್ಷ, ಎಚ್.ಎಲ್ ವಿಶ್ವನಾಥ್, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಬಿ.ಕೆ ಶ್ರೀನಾಥ್, ಕೆ.ಆರ್ ಸತೀಶ್, ಕಾ.ರಾ ನಾಗರಾಜ್, ಟಿ. ವೆಂಕಟೇಶ್, ನರಸಿಂಹಚಾರ್, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. 
ಹಿಂದೂ ಮಹಾಸಭಾ ಹಿಂದೂರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಭವನದಲ್ಲಿ ಸಾರ್ವಜನಿಕರಿಗೆ ಶಿಲಾನ್ಯಾಸ ಕಾರ್ಯಕ್ರಮ ವೀಕ್ಷಣೆಗೆ ಎಲ್‌ಸಿಡಿ ವ್ಯವಸ್ಥೆ ಕೈಗೊಳ್ಳಲಾಗಿತ್ತು. 
ಶಿಲಾನ್ಯಾಸ ವೀಕ್ಷಣೆಗೆ ವ್ಯವಸ್ಥೆ: 
ಹಿಂದೂ ಮಹಾಸಭಾ ಹಿಂದೂರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಭವನದಲ್ಲಿ ಸಾರ್ವಜನಿಕರಿಗೆ ಶಿಲಾನ್ಯಾಸ ಕಾರ್ಯಕ್ರಮ ವೀಕ್ಷಣೆಗೆ ಎಲ್‌ಸಿಡಿ ವ್ಯವಸ್ಥೆ ಕೈಗೊಳ್ಳಲಾಗಿತ್ತು. 
ಕಾರ್ಯಕ್ರಮದ ನೇತೃತ್ವವನ್ನು ಸಮಿತಿ ಅಧ್ಯಕ್ಷ, ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್ ವಹಿಸಿದ್ದರು. ಪ್ರಮುಖರಾದ ತಾ.ಪಂ. ಸದಸ್ಯ ಕೆ. ಮಂಜುನಾಥ್, ಮಣಿ ಎಎನ್‌ಎಸ್, ಮಂಗೋಟೆರುದ್ರೇಶ್, ಜಿ. ಆನಂದಕುಮಾರ್, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಕಲ್ಪನಾ, ಶೋಭಾ, ಲತಾ ಚಂದ್ರಶೇಖರ್, ಕೇಸರಿಪಡೆ ಗಿರೀಶ್, ಬಿ.ಎಸ್ ಶ್ರೀನಾಥ ಆಚಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.