ಭದ್ರಾವತಿಯಲ್ಲಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿಧನಕ್ಕೆ ನಗರದ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು.
ಭದ್ರಾವತಿ, ಸೆ. ೭: ಇತ್ತೀಚೆಗೆ ನಿಧನ ಹೊಂದಿದ ಕ್ಷೇತ್ರದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳು ಶ್ರದ್ದಾಂಜಲಿ ಸಭೆ ನಡೆಸುವ ಮೂಲಕ ಸಂತಾಪದೊಂದಿಗೆ ಗೌರವ ಸೂಚಿಸಿವೆ.
ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಅಪ್ಪಾಜಿಯವರಿಗೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ನೇತೃತ್ವದಲ್ಲಿ ಸಭೆ ನಡೆಸುವ ಮೂಲಕ ಗೌರವ ಸೂಚಿಸಲಾಯಿತು.
ಅಪ್ಪಾಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೇಣದ ಬತ್ತಿ ಹಚ್ಚುವ ಮೂಲಕ ಮೌನಾಚರಣೆ ನಡೆಸಲಾಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಅಪ್ಪಾಜಿಯವರ ಆಡಳಿತ ವೈಖರಿ, ಜನರೊಂದಿಗಿನ ಭಾವನಾತ್ಮಕ ಸಂಬಂಧಗಳನ್ನು ಸ್ಮರಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ವೇದಿಕೆ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ಭದ್ರಾವತಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿಧನಕ್ಕೆ ಹುತ್ತಾಕಾಲೋನಿ ಆಟೋನಿಲ್ದಾಣದಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು.
ಹುತ್ತಾ ಕಾಲೋನಿ ಆಟೋ ನಿಲ್ದಾಣದಲ್ಲಿ ಸಂತಾಪ:
ನಗರದ ಹುತ್ತಾ ಕಾಲೋನಿ ಸಹ್ಯಾದ್ರಿ ಕನ್ನಡ ಮತ್ತು ಆಂಗ್ಲ ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸಮೀಪದ ಆಟೋ ನಿಲ್ದಾಣದಲ್ಲಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರಿಗೆ ಸಂತಾಪ ಸೂಚಿಸಲಾಯಿತು.
ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪ್ಪಾಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ನಗರಸಭೆ ಹಿರಯ ಸದಸ್ಯ ಆರ್. ಕರುಣಾಮೂರ್ತಿ, ಜಿ.ಪಂ. ಸದಸ್ಯ ಎಸ್. ಮಣಿಶೇಖರ್, ಮಾಜಿ ಸದಸ್ಯ ಎಸ್. ಕುಮಾರ್, ಉದ್ಯಮಿ ಕುಮಾರ್, ಆಟೋ ಮಾಲೀಕರು, ಚಾಲಕರು, ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿಯಲ್ಲಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿಧನಕ್ಕೆ ನಗರ ಹಾಗು ಗ್ರಾಮೀಣ ಭಾಗದ ಬಜರಂಗದಳ ಕಾರ್ಯಕರ್ತರಿಂದ ಸಂತಾಪ ಸೂಚಿಸಲಾಯಿತು.
ಬಜರಂಗದಳದಿಂದ ಸಂತಾಪ :
ತಾಲೂಕಿನ ನಗರ ಹಾಗು ಗ್ರಾಮೀಣ ಭಾಗದ ಬಜರಂಗದಳ ಕಾರ್ಯಕರ್ತರು ಜಿಲ್ಲಾ ಸಂಚಾಲಕ ಸುನಿಲ್‌ಕುಮಾರ್ ನೇತೃತ್ವದಲ್ಲಿ ಅಪ್ಪಾಜಿ ನಿವಾಸಕ್ಕೆ ತೆರಳಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅಪ್ಪಾಜಿ ಪುತ್ರ ಎಂ.ಎ ಅಜಿತ್ ಹಾಗು ಕುಟುಂಬ ವರ್ಗದವರಿಗೆ ಸಾಂತ್ವಾನ ಹೇಳಿದರು. ತಾಲೂಕು ಸಂಚಾಲಕ ವಡಿವೇಲು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.