Tuesday, September 8, 2020

ವನಮಹೋತ್ಸವಕ್ಕೆ ನಾರಾಯಣಸ್ವಾಮಿ ಚಾಲನೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷ ಎಸ್.ಸಿ ಮೋರ್ಚಾ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ  ವನಮಹೋತ್ಸವ ಕಾರ್ಯಕ್ರಮಕ್ಕೆ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಚಾಲನೆ ನೀಡಿದರು.
ಭದ್ರಾವತಿ, ಸೆ. ೮:  ತಾಲೂಕಿನ ಕೂಡ್ಲಿಗೆರೆ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷ ಎಸ್.ಸಿ ಮೋರ್ಚಾ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ  ವನಮಹೋತ್ಸವ ಕಾರ್ಯಕ್ರಮಕ್ಕೆ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಚಾಲನೆ ನೀಡಿದರು.
         ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಸಮುದಾಯದವರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತರಾಗಿ ಪಕ್ಷವನ್ನು ಪಕ್ಷವನ್ನು ಬಲಪಡಿಸುವಂತೆ ಮನವಿ ಮಾಡಿದರು. ಎಸ್.ಸಿ ಮೋರ್ಚಾ ತಾಲೂಕು ಶಾಖೆ ವತಿಯಿಂದ ನಾರಾಯಣಸ್ವಾಮಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.  
        ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಎಸ್.ಸಿ.ಮೋರ್ಚಾ ಅಧ್ಯಕ್ಷ ಪಿ. ಗಣೇಶ್ ರಾವ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಪ್ರಮುಖರಾದ ದೇವರಾಜ್,  ರುದ್ರೇಶ,  ಪ್ರದೀಪ್, ಮಾಲತೇಶ್, ಕನಕಾಧರನ್, ರವಿಕುಮಾರ್, ಕೃಷ್ಣ ನಾಯ್ಕ, ಎಸ್. ಕುಮಾರ್, ಮನುನಾಥ್, ಕೊಟ್ರೇಶ್, ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗ್ರಾಮ ಠಾಣ, ಖಾಲಿ ಸರ್ಕಾರಿ ಭೂಮಿ ಕುರಿತು ಮಾಹಿತಿ ನೀಡಿ

ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚನೆ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
ಭದ್ರಾವತಿ, ಸೆ. ೮: ತಾಲೂಕಿನಾದ್ಯಂತ ವಿವಿಧ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ನಿವೇಶನಗಳನ್ನು ನೀಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.
     ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿರುವ ಗ್ರಾಮ ಠಾಣ ಹಾಗು ಖಾಲಿ ಇರುವ ಸರ್ಕಾರಿ ಭೂಮಿ ಕುರಿತು ನಿಖರ ಮಾಹಿತಿಯನ್ನು ಸಂಗ್ರಹಿಸುವ ಜೊತೆಗೆ ಒತ್ತುವರಿಯಾಗಿರುವುದು ಕಂಡು ಬಂದಲ್ಲಿ ಅಗತ್ಯ ಕ್ರಮ ಕೈಗೊಂಡು ತೆರವುಗೊಳಿಸಬೇಕೆಂದರು.
       ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಮೀಸಲಾತಿ ಆಧಾರದಡಿ ಪಾರದರ್ಶಕವಾಗಿ ಆಯ್ಕೆ ಮಾಡಬೇಕು. ಯಾವುದೇ ಅಕ್ರಮಗಳಿಗೆ ಅವಕಾಶ ನೀಡಬಾರದು. ಅಲ್ಲದೆ ಸರ್ಕಾರದ ವಿವಿಧ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಳ್ಳಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಗ್ರಾಮಸ್ಥರಿಗೆ ಸೂಕ್ತ ಮಾಹಿತಿ ನೀಡಬೇಕೆಂದರು.
    ಇದೆ ರೀತಿ ನಗರಸಭೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಖಾಲಿ ಭೂಮಿಗಳನ್ನು ಗುರುತಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.
      ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್, ತಹಸೀಲ್ದಾರ್ ಎಚ್.ಸಿ ಶಿವಕುಮಾರ್, ಪೌರಾಯುಕ್ತ ಮನೋಹರ್, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಎನ್. ಕೃಷ್ಣಪ್ಪ, ವಿಐಎಸ್‌ಎಲ್ ನಗರಾಡಳಿತಾಧಿಕಾರಿ ವಿಶ್ವನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
      ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಭದ್ರೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಬಾಗಿನ ಸಮರ್ಪಣೆ

ಭದ್ರಾವತಿ ಭದ್ರಾ ಜಲಾಶಯದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ವರ್ಗದವರೊಂದಿಗೆ ಮಂಗಳವಾರ ಗಂಗಾಪೂಜೆಯೊಂದಿಗೆ ಬಾಗಿನ ಸಮರ್ಪಿಸಿದರು.
ಭದ್ರಾವತಿ, ಸೆ. ೮: ತಾಲೂಕಿನ ಭದ್ರಾ ಜಲಾಶಯ ಮಂಗಳವಾರ ಬಹುತೇಕ ಪೂರ್ಣಮಟ್ಟ ತಲುಪಿದ್ದು, ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಈ ಬಾರಿ ಅತ್ಯಂತ ಸರಳವಾಗಿ ಗಂಗಾಪೂಜೆಯೊಂದಿಗೆ ಬಾಗಿನ ಸಮರ್ಪಿಸಿದರು.
       ಪ್ರತಿ ವರ್ಷ ಹಿಂದೂ, ಕ್ರೈಸ್ತ, ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮದ ಧಾರ್ಮಿಕ ಗುರುಗಳು, ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು, ಗಣ್ಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಮಹಿಳಾ ಸಂಘಟನೆಗಳ ಪ್ರಮುಖರೊಂದಿಗೆ ಗಂಗಾಪೂಜೆಯೊಂದಿಗೆ ಬಾಗಿನ ಸಮರ್ಪಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೇವಲ ಕುಟುಂಬ ಸದಸ್ಯರೊಂದಿಗೆ ಸಂಗಮೇಶ್ವರ್  ಗಂಗಾಪೂಜೆ ನೆರವೇರಿಸಿ ಅರಣ್ಯ ಇಲಾಖೆ ಬೋಟ್ ಮೂಲಕ ಬಾಗಿನ ಸಮರ್ಪಿಸಿದರು.
      ಸಹೋದರರಾದ ಉದ್ಯಮಿಗಳಾದ ಬಿ.ಕೆ ಜಗನ್ನಾಥ, ಬಿ.ಕೆ ಶಿವಕುಮಾರ್, ಮಕ್ಕಳು ಮತ್ತು ಸೊಸೆಯಂದಿರು, ಸಿಂಗನಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರ್. ಉಮಾ, ಸುಗ್ರಾಮ ಅಧ್ಯಕ್ಷೆ ಸುಜಾತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.