ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಭದ್ರಾವತಿ ಹಳೇನಗರದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೨೧: ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಕೊರೋನಾ ಸೋಂಕಿನ ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ದೇವಸ್ಥಾನ, ದರ್ಗಾದಲ್ಲಿ ವಿಶೇಷ ಪೂಜೆ ಸೋಮವಾರ ಸಂಜೆ ನೆರವೇರಿಸಲಾಯಿತು.
ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಸಹ ಭಾನುವಾರ ಸಂಜೆ ಶಾಸಕ ಬಿ.ಕೆ ಸಂಗಮೇಶ್ವರ್ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ನಡುವೆ ನಗರದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ದೇವರ ಪ್ರಾರ್ಥನೆಗೆ ಮೊರೆ ಹೋಗಿದ್ದಾರೆ.
ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ನೇತೃತ್ವದಲ್ಲಿ ಹಳೇನಗರದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೆಪಿಸಿಸಿ ಎಸ್.ಸಿ ಘಟಕದ ಸಂಚಾಲಕ ರಾಘವೇಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ರೇಣುಕಮ್ಮ, ಲೋಕೇಶ್, ಎಂ. ಶಿವಕುಮಾರ್, ಶೇಷಗಿರಿ, ರೂಪಾ ನಾರಾಯಣ, ಅಣ್ಣೋಜಿರಾವ್, ಶ್ರೀಧರ್, ಗೋಪಿ, ರಾಮಕೃಷ್ಣೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಸೈಯದ್ ಸಾದತ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಸೈಯದ್ ಸಾದತ್ ದರ್ಗಾದಲ್ಲಿ ಪ್ರಾರ್ಥನೆ:
ನಗರದ ತರೀಕೆರೆ ರಸ್ತೆಯಲ್ಲಿರುವ ಸೈಯದ್ ಸಾದತ್ ದರ್ಗಾದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಮೌಲ್ವಿ ಆಸೀಪುಲ್ಲ ನೇತೃತ್ವದಲ್ಲಿ ಪ್ರಾರ್ಥಿಸಲಾಯಿತು.
ಮುಖಂಡರಾದ ಜೆಬಿಟಿ ಬಾಬು, ಟಿಪ್ಪು ಸುಲ್ತಾನ್, ಸಮೀವುಲ್ಲಾ, ಅಬ್ದುಲ್ ಖಾದರ್, ಜಾವಿದ್, ಮುಸ್ವೀರ್ ಬಾಷಾ, ಎನ್‌ಎಕೆ ಇಮ್ರಾನ್ ಖಾನ್, ಬಷೀರ್ ಅಹಮದ್, ಇಮ್ರಾನ್ ಜುಲೆಬಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.