Wednesday, November 4, 2020

ಸಮುದಾಯ ಭವನ ನಿರ್ಮಾನಕ್ಕೆ ಭೂಮಿ ಪೂಜೆ


ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಭದ್ರಾವತಿ ತಾಲ್ಲೂಕಿನ ಹೊಸ ಸಿದ್ದಾಪುರ ಗ್ರಾಮದ ಶ್ರೀ ಶನೇಶ್ವರ ಸ್ವಾಮಿ ಮತ್ತು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಸಮುದಾಯ ಭವನ ನಿರ್ಮಾಣದ ಭೂಮಿ ಪೂಜೆ ಬುಧವಾರ ನೆರವೇರಿತು.  
ಭದ್ರಾವತಿ, ನ. ೪:  ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ  ತಾಲ್ಲೂಕಿನ ಹೊಸ ಸಿದ್ದಾಪುರ ಗ್ರಾಮದ ಶ್ರೀ ಶನೇಶ್ವರ ಸ್ವಾಮಿ ಮತ್ತು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಸಮುದಾಯ ಭವನ ನಿರ್ಮಾಣದ ಭೂಮಿ ಪೂಜೆ ಬುಧವಾರ ನೆರವೇರಿತು.  
      ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಉಪಾಧ್ಯಕ್ಷ ಶಿವಾನಂದ ಮೂರ್ತಿ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಪ್ಪ, ತಾಲೂಕು ರೈತ ಮೋರ್ಚಾ  ಉಪಾಧ್ಯಕ್ಷ ಪರಮೇಶ್ವರಪ್ಪ, ಮಹಾ ಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮುಖಂಡ ಎಚ್.ಆರ್ ಪರಶುರಾಮ್, ತಾಲೂಕು ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಮ್ರಾನ್ ನವಾಬ್,  ಯುವ ಮೋರ್ಚಾ ಅಧ್ಯಕ್ಷ ವಿಜಯ್ ಹಾಗೂ ಪಕ್ಷದ ಕಾರ್ಯಕರ್ತರು, ದೇವಸ್ಥಾನದ ಟ್ರಸ್ಟಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಡಿಎಸ್‌ಎಸ್ ತಾಲೂಕು ಸಂಘಟನಾ ಸಂಚಾಲಕರಾಗಿ ಆರ್. ರವಿನಾಯ್ಕ

ಆರ್. ರವಿನಾಯ್ಕ
ಭದ್ರಾವತಿ, ನ. ೪: ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಘಟನಾ ಸಂಚಾಲಕರಾಗಿ ಹಳೇನಗರದ ನಿವಾಸಿ ಆರ್. ರವಿನಾಯ್ಕ ನೇಮಕಗೊಂಡಿದ್ದಾರೆ.
    ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೇಮಕ ಆದೇಶ ಹೊರಡಿಸಲಾಗಿದ್ದು, ಜಿಲ್ಲಾ ಸಂಚಾಲಕ ಎ. ಅರ್ಜುನ್, ಕರ್ನಾಟಕ ದಲಿತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಬಸಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಎಂ. ಏಳುಕೋಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   ನೂತನ ತಾಲೂಕು ಸಂಘಟನಾ ಸಂಚಾಲಕರಾದ  ಆರ್. ರವಿನಾಯ್ಕರವರು ಎಂ. ಗುರುಮೂರ್ತಿ ಸೇರಿದಂತೆ ಜಿಲ್ಲಾ ಹಾಗು ತಾಲೂಕು ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ನ.೮ರಂದು ಮೊದಲ ವಾರ್ಷಿಕೋತ್ಸವ, ನೂತನ ಮಹಿಳಾ ಸಂಘ ಉದ್ಘಾಟನೆ

ಭದ್ರಾವತಿ, ನ. ೪: ತಾಲೂಕು ಮಾಜಿ ಸೈನಿಕರ ಸಂಘದ ಮೊದಲ ವಾರ್ಷಿಕೋತ್ಸವ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮಾಜಿ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ನ.೮ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ನ್ಯೂಟೌನ್ ಬಂಟರ ಭವನದಲ್ಲಿ ನಡೆಯಲಿದೆ.
     ದೇಶದಲ್ಲಿ ಮೊದಲ ಬಾರಿಗೆ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಇದು ಮಾಜಿ ಸೈನಿಕರ ಹೆಮ್ಮೆಯ ವಿಚಾರವಾಗಿದೆ. ಸಮಾರಂಭದ ಅಂಗವಾಗಿ ರಕ್ತ ಗುಂಪು ತಪಾಸಣೆ ಹಾಗು ರಕ್ತದಾನ ಶಿಬಿರ ಸಹ ಆಯೋಜಿಸಲಾಗಿದೆ. ಮಾಜಿ ಸೈನಿಕರು, ಕುಟುಂಬ ವರ್ಗದವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಂಘದ ಕಾರ್ಯದರ್ಶಿ ವಿನೋದ್ ಪೂಜಾರಿ ಕೋರಿದ್ದಾರೆ.