ಭದ್ರಾವತಿ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಹಿಂದೂ ಯುವ ಜಾಗೃತಿವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಚೈತ್ರಾ ಕುಂದಾಪುರರವರ ಪ್ರೇಮಪಾಶ (ಪ್ರೀತಿಯೆಂಬ ಜಿಹಾದಿನ ಪರದೆ) ಪುಸ್ತಕ ಬಿಡುಗಡೆಗೊಳಿಸಲಾಯಿತು.
ಭದ್ರಾವತಿ, ನ. ೨೧: ದೇಶದ ಸನಾತನ ಧರ್ಮ, ಸಂಸ್ಕೃತಿ ಉಳಿವಿಗಾಗಿ ಹೋರಾಟ ನಡೆಸುತ್ತಿರುವ ಚೈತ್ರಾ ಕುಂದಾಪುರರವರ ಪ್ರೇಮಪಾಶ (ಪ್ರೀತಿಯೆಂಬ ಜಿಹಾದಿನ ಪರದೆ) ಪುಸ್ತಕ ಬಿಡುಗಡೆ ಸಮಾರಂಭ ಶನಿವಾರ ನಗರದ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಹಿಂದೂ ಯುವ ಜಾಗೃತಿವತಿಯಿಂದ ಆಯೋಜಿಸಲಾಗಿತ್ತು.
ಎಂ.ಎಸ್.ಎಂ.ಇ ನಿರ್ದೇಶಕ ಎಚ್.ಸಿ ರಮೇಶ್ ಪುಸ್ತಕ ಬಿಡುಗಡೆಗೊಳಿಸಿದರು. ಲೇಖಕಿ ಚೈತ್ರಾ ಕುಂದಾಪುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಕಲ್ಪನಾ ಸುದರ್ಶನ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಯುವ ಉದ್ಯಮಿ ಎನ್. ಗೋಕುಲ್‌ಕೃಷ್ಣನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.