ಭದ್ರಾವತಿ, ಜ. ೭: ತಾಲೂಕಿನಾದ್ಯಂತ ಜ.೮ರಂದು ಕೋವಿಡ್-೧೯ ವ್ಯಾಕ್ಸಿನೇಷನ್ ಡ್ರೈ ರನ್ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಉಸ್ತುವಾರಿ ಅಧಿಕಾರಿ ಹಾಗು ಮೇಲ್ವಿಚಾರಕರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್‌ರವರನ್ನು ಉಸ್ತುವಾರಿ ಅಧಿಕಾರಿಯನ್ನಾಗಿ ಹಾಗು ಪೌಷ್ಠಿಕ ಆಹಾರ ವಿಭಾಗದ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪದ್ಮ ಮತ್ತು ಶಿವಮೊಗ್ಗ ನಗರ ಕಾರ್ಯಕ್ರಮ ವ್ಯವಸ್ಥಾಪಕಿ ಮಧುರವರನ್ನು ಮೇಲ್ವಿಚಾರಕರನ್ನಾಗಿ ನೇಮಕಗೊಳಿಸಲಾಗಿದೆ.
No comments:
Post a Comment