ಸುನಂದ ಬೀರಯ್ಯ
ಭದ್ರಾವತಿ, ಜ. ೧೩: ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ, ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಪ್ರಭಾಕರ ಬೀರಯ್ಯರವರ ತಾಯಿ ಸುನಂದ ಬೀರಯ್ಯ(೭೯) ಮಂಗಳವಾರ ನಿಧನ ಹೊಂದಿದರು.
ಒಂದು ಗಂಡು, ಒಂದು ಹೆಣ್ಣು, ಸೊಸೆ, ಅಳಿಯ ಹಾಗು ೪ ಜನ ಮೊಮ್ಮಕ್ಕಳನ್ನು ಹೊಂದಿದ್ದರು. ಮೃತರ ಪತಿ ದಿವಂಗತ ಕೆಬಿಡಿ ಬೀರಯ್ಯನವರು ಸಾಮಾಜಿಕ, ಶೈಕ್ಷಣಿಕ ಹಾಗು ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ನಗರದಲ್ಲಿ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಮೃತರ ಅಂತ್ಯಕ್ರಿಯೆ ನಗರದ ಬೈಪಾಸ್ ರಸ್ತೆ ಸಮೀಪದ ತಿಮ್ಲಾಪುರ ರಸ್ತೆಯಲ್ಲಿರುವ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ನಗರದ ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment