ವಿಜಯದೇವಿಯವರ ಆಯ್ಕೆ ಭದ್ರಾವತಿ ನಗರದ ಹಿರಿಮೆ ಮತ್ತಷ್ಟು ಹೆಚ್ಚಿಸಿದೆ : ಎಂ. ಪರಮೇಶ್
ವಿಜಯಪುರ ಕರ್ನಾಟಕ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡದ ಮೊದಲ ಮಹಿಳಾ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಭದ್ರಾವತಿ ನಗರದ ನಿವಾಸಿ, ಸಾಹಿತಿ ಡಾ. ಎಸ್.ಎಸ್ ವಿಜಯದೇವಿಯವರನ್ನು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜ. ೧೭: ವಿಜಯಪುರ ಕರ್ನಾಟಕ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡದ ಮೊದಲ ಮಹಿಳಾ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ನಗರದ ನಿವಾಸಿ, ಸಾಹಿತಿ ಡಾ. ಎಸ್.ಎಸ್ ವಿಜಯದೇವಿಯವರನ್ನು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ಬಾರಿ ಆಯೋಜಿಸಲಾಗಿರುವ ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಜಯದೇವಿಯವರನ್ನು ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಸಂಶೋಧಕರು, ಲೇಖಕರು ಮತ್ತು ಸಾಹಿತಿಯಾಗಿರುವ ವಿಜಯದೇವಿಯವರು ಕನ್ನಡ ಭಾಷೆ ಹಾಗು ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆ ಅನನ್ಯವಾಗಿದೆ. ಅವರನ್ನು ಆಯ್ಕೆ ಮಾಡಿರುವುದು ಭದ್ರಾವತಿ ನಗರದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್ ಪ್ರಶಂಸೆ ವ್ಯಕ್ತಪಡಿಸಿದರು.
ಮಮತ ವಿಜಯದೇವಿಯವರ ಕಿರುಪರಿಚಯ ಮಾಡಿಕೊಟ್ಟರು. ಅಭಿನಂದನೆ ಸ್ವೀಕರಿಸಿದ ವಿಜಯದೇವಿಯವರು ವೇದಿಕೆ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿ ಕನ್ನಡ ನಾಡಿಗೆ ವಚನ ಸಾಹಿತ್ಯದ ಕೊಡುಗೆಯನ್ನು ವಿವರಿಸಿದರು.
ವೇದಿಕೆ ಪ್ರದಾನ ಕಾರ್ಯದರ್ಶಿ ಅಶೋಕ್‌ರಾವ್ ಘೋರ್ಪಡೆ, ಯುವ ಘಟಕದ ಅಧ್ಯಕ್ಷ ರವಿಕುಮಾರ್, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ ಹಾಗೂ ರಮೇಶ್, ಸದಸ್ಯರುಗಳಾದ ಪಿ. ನಾಗರಾಜ್, ಮಲ್ಲಿಕಾರ್ಜುನ್, ಪ್ರಾಣೇಶ್, ದಿಲೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಹಾಗೂ ಇತರೆ ಕರವೇ ಸದಸ್ಯರು ಉಪಸ್ಥಿತರಿದ್ದರು.
No comments:
Post a Comment