ಭದ್ರಾವತಿ, ಜ. ೨: ಜೆ.ಎಚ್ ಪಟೇಲ್‌ರವರ ಅಭಿಮಾನಿಗಳ ಬಳಗದ ವತಿಯಿಂದ ಜ.೩ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಬಿ.ಎಚ್ ರಸ್ತೆ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಜೆ.ಎಚ್ ಪಟೇಲ್‌ರವರ ನೆನಪಿನಲ್ಲಿ ಸಮಾಜವಾದದ ಚಿಂತನೆಗಳು ವಿಚಾರ ಸಂಕೀರ್ಣ ಹಮ್ಮಿಕೊಳ್ಳಲಾಗಿದೆ.
ಬಿಳಿಕಿ ಹಿರೇಮಠದ ಶ್ರೀ ರಾಜೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದು, ಜೆ.ಎಚ್ ಪಟೇಲ್‌ರವರ ಪುತ್ರ ಮಾಜಿ ಶಾಸಕ ಮಹಿಮ ಜೆ. ಪಟೇಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಆಯೋಜಕ ಶಶಿಕುಮಾರ್ ಎಸ್. ಗೌಡ ಮತ್ತು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಉಪಸ್ಥಿತರಿರುವರು.
ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ಪೌರಾಯುಕ್ತ ಮನೋಹರ್, ಮಂಗೋಟೆ ರುದ್ರೇಶ್, ಸ್ನೇಹ ಜೀವಿ ಉಮೇಶ್, ಧನಂಜಯ, ಡಾ.ಕೆ ನಾಗರಾಜ್, ದೀಪಕ್ ನರಾಜ್, ಬಿ.ಆರ್ ದಿನೇಶ್‌ಕುಮಾರ್, ಲಕ್ಕಣ್ಣ, ಎಚ್.ಆರ್ ಲೋಕೇಶ್‌ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
No comments:
Post a Comment