ಕೋವಿಡ್-೧೯ ಲಸಿಕೆ ಹಾಕುವ ಕಾರ್ಯಕ್ರಮ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಸಹ ಮುಂದುವರೆಯಿತು. ಆರೋಗ್ಯ ಇಲಾಖೆ ಹಿರಿಯ ಆರೋಗ್ಯ ಸಹಾಯಕ ನೀಲೇಶ್ ರಾಜ್ ಲಸಿಕೆ ಪಡೆದುಕೊಂಡರು..
ಭದ್ರಾವತಿ, ಜ. ೧೮: ಕೋವಿಡ್-೧೯ ಲಸಿಕೆ ಹಾಕುವ ಕಾರ್ಯಕ್ರಮ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಸಹ ಮುಂದುವರೆಯಿತು
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಆಡಳಿತ ವೈದ್ಯಾಧಿಕಾರಿ ಡಾ. ದೇವಾನಂದ್, ಹಿರಿಯ ಆರೋಗ್ಯ ಸಹಾಯಕರಾದ ನೀಲೇಶ್‌ರಾಜ್, ಹಾಲಸ್ವಾಮಿ, ವೈದ್ಯಾಧಿಕಾರಿ ಡಾ. ದೇವರಾಜ್, ಸಮುದಾಯ ಆರೋಗ್ಯ ಕೇಂದ್ರದ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಕಿರಿಯ ಆರೋಗ್ಯ ಸಹಾಯಕರು ಹಾಗು ಸಿಬ್ಬಂದಿಗಳು ಲಸಿಕೆ ಪಡೆದುಕೊಂಡರು. ಕಿರಿಯ ಫಾರ್ಮಸಿ ಅಧಿಕಾರಿ ದತ್ತಾತ್ರೇಯರವರಿಗೆ ಮೊದಲ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಶನಿವಾರದಿಂದ ಆರಂಭಗೊಂಡಿರುವ ಲಸಿಕೆ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮೊದಲ ಹಂತದಲ್ಲಿ ಲಸಿಕೆ ಹಾಕಲಾಗುತ್ತಿದೆ. ಸ್ಟಾಫ್ ನರ್ಸ್ ಡಯಾನ ಲಸಿಕೆ ಹಾಕಿದರು.
No comments:
Post a Comment