ಭದ್ರಾವತಿ ಹೊಸಸೇತುವೆ ರಸ್ತೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಮಹೋತ್ಸವ ಗುರುವಾರ ಅದ್ದೂರಿಯಾಗಿ ಜರುಗಿತು.
ಭದ್ರಾವತಿ, ಜ. ೨೮: ನಗರದ ಹೊಸಸೇತುವೆ ರಸ್ತೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಮಹೋತ್ಸವ ಗುರುವಾರ ಅದ್ದೂರಿಯಾಗಿ ಜರುಗಿತು.
ಬನಶಂಕರಿ ದೇವಿಗೆ ಪಂಚಾಮೃತ ಅಭಿಷೇಕ, ಮಹಾ ಗಣಪತಿ ಹೋಮ, ದುರ್ಗಾಹೋಮ ಹಾಗೂ ಕಳಾಹೋಮ ಏರ್ಪಡಿಸಲಾಗಿತ್ತು. ಪೂರ್ಣಾಹುತಿಯ ನಂತರ ಮಹಾಮಂಗಳಾರತಿ ಮತ್ತು ಮಹಾಪ್ರಸಾದದ ವ್ಯವಸ್ಥೆ ಏರ್ಪಡಿಸಲಾಗಿತ್ತು. ನೂರಾರು ಭಕ್ತರು ಪಾಲ್ಗೊಂಡಿದ್ದರು. ಸಂಜೆ ರಾಜಬೀದಿ ಉತ್ಸವ ಏರ್ಪಡಿಸಲಾಗಿತ್ತು. ಪ್ರತಿ ವರ್ಷದಂತೆ ಈ ಬಾರಿ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡಿದ್ದರು.
ತಾಲೂಕು ಕಚೇರಿ ರಸ್ತೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲೂ ಸಹ ದೇವಿಗೆ ಅಭಿಷೇಕ, ವಿಶೇಷಪೂಜೆ ಏರ್ಪಡಿಸಲಾಗಿತ್ತು. ನೂರಾರು ಭಕ್ತಾಧಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.
ಭದ್ರಾವತಿ ಹೊಸಸೇತುವೆ ರಸ್ತೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಮಹೋತ್ಸವ ಅಂಗವಾಗಿ ಅಮ್ಮನವರಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
No comments:
Post a Comment