ಭದ್ರಾವತಿ, ಜ. ೩೦: ಪ್ರತಿ ವರ್ಷದಂತೆ ಈ ಬಾರಿ ಸಹ ತಾಲೂಕಿನಾದ್ಯಂತ ಜ.೩೧ರಂದು ಆರೋಗ್ಯ ಇಲಾಖೆ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಬಾರಿ ತಾಲೂಕಿನಲ್ಲಿ ೫ ವರ್ಷದೊಳಗಿನ ಒಟ್ಟು ೨೬,೯೦೮ ಮಕ್ಕಳನ್ನು ಗುರುತಿಸಲಾಗಿದೆ. ಈ ಪೈಕಿ ಗ್ರಾಮಾಂತರ ಪ್ರದೇಶದಲ್ಲಿ ೧೬,೧೩೫ ಮತ್ತು ನಗರ ಪ್ರದೇಶದಲ್ಲಿ ೧೦,೭೭೩ ಮಕ್ಕಳಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು ೧೦೦ ಮತ್ತು ನಗರ ಪ್ರದೇಶದಲ್ಲಿ ಒಟ್ಟು ೬೭ ಬೂತ್‌ಗಳಲ್ಲಿ ಪೋಲಿಯೋ ಹನಿ ಹಾಕಲಾಗುವುದು. ಒಟ್ಟು ೮ ಟ್ರಾನ್ಸಿಟ್ ತಂಡಗಳು ಕಾರ್ಯ ನಿರ್ವಹಿಸಲಿವೆ.
ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ೮ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಕೋರಿದ್ದಾರೆ.
No comments:
Post a Comment