ಶತಾಯುಷಿ ಪುಟ್ಟಮ್ಮ
ಭದ್ರಾವತಿ, ಜ. ೨೦: ನಗರಸಭೆ ವ್ಯಾಪ್ತಿಯ ಜನ್ನಾಪುರ ಫಿಲ್ಟರ್ ಶೆಡ್ ನಿವಾಸಿ, ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡರವರ ಅಜ್ಜಿ, ಶತಾಯುಷಿ ಪುಟ್ಟಮ್ಮ(೧೦೧) ಬುಧವಾರ ನಿಧನ ಹೊಂದಿದರು.
ಪುಟ್ಟಮ್ಮ ವಿಐಎಸ್‌ಎಲ್ ಕಾರ್ಖಾನೆಯ ಗೆಸ್ಟ್‌ಹೌಸ್ ವಿಭಾಗದಲ್ಲಿ ಸುಮಾರು ೪೦ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮೊಮ್ಮಗ ಶಶಿಕುಮಾರ್ ಎಸ್ ಗೌಡ ಹಾಗು ಮರಿಮೊಮ್ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಇವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಇವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment