ಆಡಳಿತ ಮಂಡಳಿ, ನಿವೃತ್ತ ನೌಕರರರಿಂದ ಬೀಳ್ಕೊಡುಗೆ
ಭಾರತೀಯ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಆಡಳಿತ ಮಂಡಳಿ, ನಿವೃತ್ತ ನೌಕರರರಿಂದ ಬೀಳ್ಕೊಡುಗೆ ನೀಡಲಾಯಿತು.
ಭದ್ರಾವತಿ, ಜ. ೬: ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್ ವರ್ಗಾವಣೆಗೊಂಡಿದ್ದಾರೆ.
೨೦೧೦ರಲ್ಲಿ ಉಕ್ಕು ಪ್ರಾಧಿಕಾರದಲ್ಲಿ ಮಹಾಪ್ರಬಂಧಕರಾಗಿ ಸೇರ್ಪಡೆಗೊಂಡಿದ್ದು, ನಂತರ ೨೦೧೮ರಲ್ಲಿ ಧನ್‌ಬಾದ್ ಕೊಲ್ಲರಿಸ್ ವಿಭಾಗದಲ್ಲಿ ಪ್ರಭಾರಿ ಮಹಾಪ್ರಬಂದಕರಾಗಿ ಕರ್ತವ್ಯ ನಿರ್ವಹಿಸಿ ನಂತರ ಕಾರ್ಯಪಾಲಕ ನಿರ್ದೇಶಕರಾಗಿ ಪದೋನ್ನತ್ತಿ ಹೊಂದಿ ವಿಐಎಸ್‌ಎಲ್ ಕಾರ್ಖಾನೆಗೆ ವರ್ಗಾವಣೆಗೊಂಡಿದ್ದರು. ಮೇ.೧೦, ೨೦೧೯ರಂದು ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು. ಸುಮಾರು ೨೦ ತಿಂಗಳು ಕರ್ತವ್ಯ ನಿರ್ವಹಿಸಿ ಇದೀಗ ವರ್ಗಾವಣೆಗೊಂಡಿದ್ದಾರೆ.
ಕಾರ್ಖಾನೆ ವತಿಯಿಂದ ಬೀಳ್ಕೊಡುಗೆ :
ಕಾರ್ಖಾನೆ ಆಡಳಿತ ಮಂಡಳಿ ಹಾಗು ಅಧಿಕಾರಿಗಳ ಸಂಘ ಮತ್ತು ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಕೆ.ಎಲ್ ಶ್ರೀನಿವಾಸ್‌ರಾವ್‌ರವರಿಗೆ ಬೀಳ್ಕೊಡುಗೆ ನೀಡಲಾಯಿತು.
ನಗರಾಡಳಿತಾಧಿಕಾರಿ ವಿಶ್ವನಾಥ್, ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್, ಅಧಿಕಾರಿಗಳ ಸಂಘದ ಅಧ್ಯಕ್ಷ ವೀರಣ್ಣ, ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಡವೀಶಯ್ಯ, ಬಿ.ಆರ್ ನಾಗರಾಜ್, ಎಸ್. ನರಸಿಂಹಚಾರ್, ನಂಜಪ್ಪ ಮತ್ತು ಹನುಮಂತಪ್ಪ ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment