ಪಾಕಿಸ್ತಾನದ ಪರ ಘೋಷಣೆ ಕೂಗಿದ ನೈಜ ಆರೋಪಿಗಳನ್ನು ಬಂಧಿಸಿ ಅಮಾಯಕರನ್ನು ತಕ್ಷಣ ಬಿಡುಗಡೆಗೊಳಿಸುವ ಜೊತೆಗೆ ಪ್ರಕರಣ ಹಿಂಪಡೆಯುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಜ. ೪: ಪಾಕಿಸ್ತಾನದ ಪರ ಘೋಷಣೆ ಕೂಗಿದ ನೈಜ ಆರೋಪಿಗಳನ್ನು ಬಂಧಿಸಿ ಅಮಾಯಕರನ್ನು ತಕ್ಷಣ ಬಿಡುಗಡೆಗೊಳಿಸುವ ಜೊತೆಗೆ ಪ್ರಕರಣ ಹಿಂಪಡೆಯುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಸೋಮವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಡಿ.೩೦ರಂದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದಂದು ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಅಂದು ಎಸ್‌ಡಿಪಿಐ ಕಾರ್ಯಕರ್ತರು ತಮ್ಮ ಪಕ್ಷದ ಪರ ಘೋಷಣೆಗಳನ್ನು ಕೂಗಿದ್ದಾರೆ ಹೊರತು ಪಾಕಿಸ್ತಾನದ ಪರವಾಗಿ ಘೋಷಣೆಗಳನ್ನು ಕೂಗಿಲ್ಲ. ಆದರೂ ಪಾಕಿಸ್ತಾನದ ಪರ ಘೋಷಣೆಯನ್ನು ಕೂಗಲಾಗಿದೆ ಎಂಬ ಆರೋಪದ ಮೇರೆಗೆ ೩ ಮಂದಿ ಅಮಾಯಕರನ್ನು ಬಂಧಿಸಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ಹಾಕುವ ಜೊತೆಗೆ ರಾತ್ರೋರಾತ್ರಿ ಮನೆಗಳಿಗೆ ನುಗ್ಗಿ ಬಂಧಿಸಲಾಗಿದೆ. ಇದೀಗ ಬಿಜೆಪಿ ಪಕ್ಷದ ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆಳನ್ನು ಕೂಗುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹಿನ್ನಲೆಯಲ್ಲಿ ನೈಜ ಆರೋಪಿಳನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಲಾಯಿತು.
ತಕ್ಷಣ ಬಂಧಿಸಿರುವ ಅಮಾಯಕರನ್ನು ಬಿಡುಗಡೆಗೊಳಿಸಿ ಪ್ರಕರಣ ರದ್ದುಗೊಳಿಸಬೇಕು. ಸರ್ಕಾರ ನೊಂದ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಯಿತು.
ಎಸ್‌ಡಿಪಿಐ ಜಿಲ್ಲಾ ಸಮಿತಿ ಅಧ್ಯಕ್ಷ ಸಲೀಂ ಖಾನ್, ತಾಲೂಕು ಸಮಿತಿ ಅಧ್ಯಕ್ಷ ಮೊಹಮ್ಮದ್ ತಾಹೀರ್, ಪ್ರಧಾನ ಕಾರ್ಯದರ್ಶಿ ಮೊಹಮದ್ ಗೌಸ್, ಪಾಪುಲರ್ ಫ್ರಂಟ್ ಆಫ್ ಇಂಡಿಯಾ ತಾಲೂಕು ಶಾಖೆ ಅಧ್ಯಕ್ಷ ಸಾಧಿಕ್ ಉಲ್ಲಾ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment