ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಭದ್ರಾವತಿ, ಜ. ೩೦: ನಗರದ ಭದ್ರಾವತಿ ಕೆಎಸ್‌ಆರ್‌ಟಿಸಿ ಘಟಕದಿಂದ ಮಣಿಪಾಲ್-ಉಡುಪಿ ನಡುವೆ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಆರೋಗ್ಯ ಸೌಲಭ್ಯ ಪಡೆದುಕೊಳ್ಳಲು ನಗರದಿಂದ ಮಣಿಪಾಲ್ ಆಸ್ಪತ್ರೆಗೆ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದು, ಅಲ್ಲದೆ ಅನಾರೋಗ್ಯಕ್ಕೆ ಒಳಗಾದವರ ಜೊತೆ ಸಹಾಯಕರು, ಕುಟುಂಬಸ್ಥರು ಸಹ ತೆರಳುತ್ತಿದ್ದಾರೆ. ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅದರಲ್ಲೂ ಗ್ರಾಮೀಣ ಭಾಗದ ಜನರು ತೊಂದರೆ ಅನುಭವಿಸುವಂತಾಗಿದೆ.
ನಗರ ಹಾಗು ಗ್ರಾಮಾಂತರ ಭಾಗದಲ್ಲಿ ವಾಸಿಸುತ್ತಿರುವ ಹೆಚ್ಚಿನ ಜನರು ಕೂಲಿ ಕಾರ್ಮಿಕರು, ಬಡ ವರ್ಗದವರಾಗಿದ್ದು, ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಅಗತ್ಯವಾಗಿದೆ. ಭದ್ರಾವತಿ ಘಟಕದಿಂದ ಶಿವಮೊಗ್ಗ-ತೀರ್ಥಹಳ್ಳಿ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ, ಇದೆ ರೀತಿ ಶಿವಮೊಗ್ಗ-ಆಯನೂರು-ರಿಪ್ಪನ್‌ಪೇಟೆ-ಹುಂಚ-ಕೋಣಂದೂರು-ತೀರ್ಥಹಳ್ಳಿ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ ಹಾಗು ಎನ್.ಆರ್ ಪುರ-ಕೊಪ್ಪ-ಹರಿಹರಪುರ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ ಬಸ್ ಸಂಚಾರ ಆರಂಭಿಸುವಂತೆ ಈಗಾಗಲೇ ಹಲವು ಬಾರಿ ಶಾಸಕರು ಹಾಗು ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಕೆಎಸ್‌ಆರ್‌ಟಿಸಿ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ ಮಾಡಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮನವಿಗೆ ಪೂರಕವಾಗಿ ಸ್ಪಂದಿಸಿ ತಕ್ಷಣ ಬಸ್ ಸಂಚಾರ ಆರಂಭಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ವೇದಿಕೆ ಗೌರವಾಧ್ಯಕ್ಷ ಡಿ. ನಂಜಪ್ಪ, ಅಧ್ಯಕ್ಷ ಜಿ.ಟಿ ಬಸವರಾಜ್, ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹಮೂರ್ತಿ ಮತ್ತು ಖಜಾಂಚಿ ಕೆ.ಜೆ ಹನುಮಂತಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸರಿಯಾದ ಬೇಡಿಕೆ...ಸಹಕಾರಿ ಸಂಘಗಳ ಬಸ್ಗಳು ಇಲ್ಲದ ಕಾರಣ ಸರ್ಕಾರಿ ಬಸ್ಗಳು ಬೇಡಿಕೆ ಹೆಚ್ಚಾಗಿದೆ.
ReplyDeleteಈಗ ನಾವು ಉಡುಪಿಗೆ ಹೋಗಲು ಶಿವಮೊಗ್ಗದಿಂದ ಹೋಗಬೇಕು..
ಹಾಗಾಗಿ ಕೊಪ್ಪ ಮಾರ್ಗವಾಗಿ ಹೋಗಲು ಅನುಕೂಲವಾಗುತ್ತದೆ..