ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಗುರುವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಅಚರಿಸಲಾಯಿತು.
ಭದ್ರಾವತಿ, ಜ. ೨೧: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಗುರುವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಅಚರಿಸಲಾಯಿತು.
ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಯಂತಿ ಆಚರಣೆಗೆ ಚಾಲನೆ ನೀಡಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ಗಂಗಾಮತಸ್ಥರ ಸಂಘದ ಪ್ರಮುಖರಾದ ಯಲ್ಲಪ್ಪ ಹಾಗು ಪದಾಧಿಕಾರಿಗಳು ಮತ್ತು ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment