೩೨ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ರೋಟರಿ ಕ್ಲಬ್ ವತಿಯಿಂದ ಭದ್ರಾವತಿಯಲ್ಲಿ ಸಂಚಾರಿ ಪೊಲೀಸ್ ಸಹಯೋಗದೊಂದಿಗೆ ಗುರುವಾರ ಜಾಗೃತಿ ಜಾಥಾ ನಡೆಸಲಾಯಿತು.
ಭದ್ರಾವತಿ, ಜ. ೨೮: ೩೨ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ರೋಟರಿ ಕ್ಲಬ್ ವತಿಯಿಂದ ನಗರದ ಸಂಚಾರಿ ಪೊಲೀಸ್ ಸಹಯೋಗದೊಂದಿಗೆ ಗುರುವಾರ ಜಾಗೃತಿ ಜಾಥಾ ನಡೆಸಲಾಯಿತು.
ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಸಿ.ಎನ್ ರಸ್ತೆ ರಂಗಪ್ಪವೃತ್ತದ ವರೆಗೆ ಜಾಥಾ ನಡೆಯಿತು. ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಮತ್ತು ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ ಶಾಂತಕುಮಾರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.
ರೋಟರಿ ಕ್ಲಬ್ ಕಾರ್ಯದರ್ಶಿ ಎಂ.ಎನ್ ಗಿರೀಶ್, ಜೋನಲ್ ಲೆಫ್ಟಿನೆಂಟ್ ಕೆ. ನಾಗರಾಜ್, ಸುಂದರ್ ಬಾಬು, ತೀರ್ಥಯ್ಯ, ರಾಘವೇಂದ್ರ ಉಪಾಧ್ಯಾಯ, ಕಸಾಪ ಅಧ್ಯಕ್ಷ ಅಪೇಕ್ಷ ಮಂಜುನಾಥ್, ಬಿಜೆಪಿ ಯುವ ಘಟಕದ ಅಧ್ಯಕ್ಷ ವಿಜಯ್‌ರಾಜ್, ಸಂಚಾರಿ ಠಾಣಾಧಿಕಾರಿ ಕವಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment