ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ
ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಹುದ್ದೆ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನಲೆಯಲ್ಲಿ ಉನ್ನತ ಮಟ್ಟದ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಭದ್ರಾವತಿಯಲ್ಲಿ ಸೋಮವಾರ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜ. ೨೫: ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಹುದ್ದೆ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನಲೆಯಲ್ಲಿ ಉನ್ನತ ಮಟ್ಟದ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಇತ್ತೀಚಿನ ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ. ಅದರಲ್ಲೂ ಲೋಕಸೇವಾ ಆಯೋಗದಲ್ಲಿ ಹೆಚ್ಚಿನ ಭ್ರಷ್ಟಾಚಾರ ಪ್ರಕರಣಗಳು ಕಂಡು ಬರುತ್ತಿದ್ದು, ಪ್ರಕರಣಗಳು ಮರುಕಳುಹಿಸುತ್ತಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ರೀತಿಯ ಪ್ರಕರಣಗಳು ಪುನಃ ನಡೆಯದಂತೆ ಎಚ್ಚರ ವಹಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರಮುಖರಾದ ಮನು, ಆಕಾಶ್, ವರುಣ್, ಪುನಿತ್ ಮತ್ತು ಸೂರ್ಯ ಇತರರು ಉಪಸ್ಥಿತರಿದ್ದರು.
No comments:
Post a Comment