ಭದ್ರಾವತಿ, ಜ. ೧೯: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ.೨೬ರಂದು ಬೆಳಿಗ್ಗೆ ೯ ಗಂಟೆಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ೭೨ನೇ ಗಣರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಸಿ.ಎಂ ಇಬ್ರಾಹಿಂ, ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್ ಭೋಜೆಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ತಾ.ಪಂ. ಅಧ್ಯಕ್ಷೆ ಡಿ. ಲಕ್ಷ್ಮೀ ದೇವಿ, ಉಪಾಧ್ಯಕ್ಷೆ ನೇತ್ರಾಬಾಯಿ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ನಾಗರಾಜ್, ಜಿ.ಪಂ. ಸದಸ್ಯರಾದ ಡಿ.ಆರ್ ರೇಖಾ ಉಮೇಶ್, ಜೆ.ಪಿ ಯೋಗೇಶ್, ಎಸ್. ಮಣಿಶೇಖರ್, ವೀರಭದ್ರಪ್ಪ ಪೂಜಾರಿ, ಎಪಿಎಂಸಿ ಅಧ್ಯಕ್ಷ ಲವೇಶ್‌ಗೌಡ ಮತ್ತು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ತಾಲೂಕು ದಂಡಾಧಿಕಾರಿ ಜಿ. ಸಂತೋಷ್‌ಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದು, ತಾಲೂಕು ಪಂಚಾಯಿತಿ ಸದಸ್ಯರು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment