ಭದ್ರಾವತಿಯಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದವರೆಗೆ ಪುರಂದರದಾಸರ ಮೆರವಣಿಗೆ ನಡೆಯಿತು.
ಭದ್ರಾವತಿ, ಫೆ. ೧೧: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹರಿದಾಸ ಮಹಿಳಾ ಮಂಡಳಿಯಿಂದ ಗುರುವಾರ ಪುರಂದರದಾಸರ ಆರಾಧನಾ ಮಹೋತ್ಸವ ಜರುಗಿತು.
ರಾಯರಿಗೆ ಪಂಚಾಮೃತ ಅಭಿಷೇಕ, ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದವರೆಗೆ ಪುರಂದರದಾಸರ ಮೆರವಣಿಗೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಜ್ಞಾನವಾಹಿನಿ ಭಜನಾ ಮಂಡಳಿ, ಹರಿಪ್ರಿಯಾ ಭಜನಾ ಮಂಡಳಿ ಸೇರಿದಂತೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗು ವೇದಬ್ರಹ್ಮ ಶ್ರೀ ಗೋಪಾಲಚಾರ್‌ರವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಿತು.
ಗೋಪಾಲಚಾರ್, ಶ್ರೀನಿವಾಸಚಾರ್, ಪ್ರಧಾನ ಅರ್ಚಕ ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ಮುರಳಿಧರ ತಂತ್ರಿ, ನಿರಂಜನ್ ಆಚಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ