ಬುಧವಾರ ರಾತ್ರಿ ಭದ್ರಾವತಿ ನಗರಕ್ಕೆ ಆಗಮಿಸಿದ ೨ನೇ ಹಂತದ ಮಾದಿಗ ವಿರಾಟ್ ಶಕ್ತಿ ಪ್ರದರ್ಶನದ ಮಾದಿಗ 'ಚೈತನ್ಯ ರಥ ಯಾತ್ರೆ'ಗೆ ಅದ್ದೂರಿ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಮಾದಿಗ ಒಕ್ಕೂಟದ ರಾಜ್ಯ ಮುಖಂಡರು ಮಾತನಾಡಿದರು.
ಭದ್ರಾವತಿ, ಫೆ. ೪: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗಾಗಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ೨ನೇ ಹಂತದ ಮಾದಿಗ ವಿರಾಟ್ ಶಕ್ತಿ ಪ್ರದರ್ಶನದ ಮಾದಿಗ 'ಚೈತನ್ಯ ರಥ ಯಾತ್ರೆ' ಬುಧವಾರ ರಾತ್ರಿ ನಗರಕ್ಕೆ ಆಗಮಿಸಿತು.
ತಾಲೂಕು ಮಾದಿಗ ಒಕ್ಕೂಟದಿಂದ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ರಥ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಲಾಯಿತು. ಒಕ್ಕೂಟದ ರಾಜ್ಯ ಸಮಿತಿ ಮುಖಂಡರಾದ ಹೆಣ್ಣೂರು ಲಕ್ಷ್ಮಿನಾರಾಯಣ, ರಾಮಚಂದ್ರ ಕಬಲಿಕ್ಕರ್, ಅಮ್ಮಣಾ ಲಿಂಬೋಲಿಕರ್ ಮತ್ತು ನಾಗರಾಜ್ ಸೇರಿದಂತೆ ಇನ್ನಿತರರು ಮಾತನಾಡಿ, ಎ.ಜೆ ಸದಾಶಿವ ಆಯೋಗದ ವರದಿಯನ್ನು ಸರ್ಕಾರ ತಕ್ಷಣ ಜಾರಿಗೆ ತರಬೇಕೆಂದು ಆಗ್ರಹಿಸಿದರು.
ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗಾಗಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ೨ನೇ ಹಂತದ ಮಾದಿಗ ವಿರಾಟ್ ಶಕ್ತಿ ಪ್ರದರ್ಶನದ ಮಾದಿಗ 'ಚೈತನ್ಯ ರಥ ಯಾತ್ರೆ' ಬುಧವಾರ ರಾತ್ರಿ ಭದ್ರಾವತಿ ನಗರಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಮಾದಿಗ ಒಕ್ಕೂಟದ ರಾಜ್ಯ ಮುಖಂಡರು ಮಾತನಾಡಿದರು.
ಒಕ್ಕೂಟದ ತಾಲೂಕು ಅಧ್ಯಕ್ಷ ಎಂ. ಶಿವಕುಮಾರ್, ಗೌರವಾಧ್ಯಕ್ಷ ಶಿವಬಸಪ್ಪ, ಪ್ರಮುಖರಾದ ಹರೀಶ್, ಕೃಷ್ಣ, ಮೈಲಾರಪ್ಪ, ವೆಂಕಟೇಶ್, ಮಂಜು(ಹಜಾರೆ), ನಾಗರಾಜ್, ಭರತ್, ಸಿರಿಯೂರು ಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment