ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಂಗಳವಾರ ಭದ್ರಾವತಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಫೆ. ೨೩: ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಲು ಈ ಹಿಂದೆ ಆಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸಲಾಗಿತ್ತು. ಇದರ ಪರಿಣಾಮ ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ಜಾರಿಗೆ ತರಲಾಯಿತು. ಆದರೆ ಇದೀಗ ರಾಜ್ಯದ ಪ್ರತಿಷ್ಟಿತ ಮೆಡಿಕಲ್ ಕಾಲೇಜುಗಳಲ್ಲಿ ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆಯನ್ನು ಸಾಕ್ಷಿ ಸಮೇತವಾಗಿ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಸೀಟುಗಳ ಮಾರಾಟದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಜೊತೆಗೆ ಆದಾಯ ತೆರಿಗೆ ಇಲಾಖೆಯ ಕಾಯ್ದೆಯೂ ಕೂಡ ಇಲ್ಲಿ ಉಲ್ಲಂಘನೆ ಆಗಿದೆ. ಈ ಹಿನ್ನಲೆಯಲ್ಲಿ ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ಸರ್ಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಆಕಾಶ್, ಅವಿನಾಶ್, ಮನು, ದರ್ಶನ್, ಪುನೀತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment