ಸ್ಪೋಟದಲ್ಲಿ ಮೃತಪಟ್ಟ ಬಡ ಕಾರ್ಮಿಕರ ಕುಟುಂಬಗಳಿಗೆ ತಲಾ ೨೦ ಲಕ್ಷ ರು. ಪರಿಹಾರ ನೀಡಿ
ಜಯ ಕರ್ನಾಟಕ ಜನಪರ ವೇದಿಕೆವತಿಯಿಂದ ಭದ್ರಾವತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕಲ್ಲು ಗಣಿಗಾರಿಕೆಯೊಂದರಲ್ಲಿ ನಡೆದಿರುವ ಸ್ಪೋಟ ಪ್ರಕರಣವನ್ನು ಖಂಡಿಸುವ ಜೊತೆಗೆ ಮೃತಪಟ್ಟಿರುವ ಬಡ ಕುಟುಂಬಗಳಿಗೆ ತಲಾ ೨೦ ಲಕ್ಷ ರು. ಪರಿಹಾರ ನೀಡುವಂತೆ ಆಗ್ರಹಿಸಿ ಗುರುವಾರ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಫೆ. ೨೫: ಜಯ ಕರ್ನಾಟಕ ಜನಪರ ವೇದಿಕೆವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಕಲ್ಲು ಗಣಿಗಾರಿಕೆಯೊಂದರಲ್ಲಿ ನಡೆದಿರುವ ಸ್ಪೋಟ ಪ್ರಕರಣವನ್ನು ಖಂಡಿಸುವ ಜೊತೆಗೆ ಮೃತಪಟ್ಟಿರುವ ಬಡ ಕುಟುಂಬಗಳಿಗೆ ತಲಾ ೨೦ ಲಕ್ಷ ರು. ಪರಿಹಾರ ನೀಡುವಂತೆ ಆಗ್ರಹಿಸಿ ಗುರುವಾರ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಸಂಘಟನೆಯ ಪ್ರಮುಖರು ಮಾತನಾಡಿ, ಇತ್ತೀಚೆಗೆ ಶಿವಮೊಗ್ಗ ಜಿಲ್ಲೆ ಹುಣಸೋಡು ಬಳಿ ಕಲ್ಲು ಗಣಿಗಾರಿಕೆಯಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಪೋಟಗೊಂಡ ಪರಿಣಾಮ ಒಟ್ಟು ೮ ಜನ ಮೃತಪಟ್ಟರು. ಆದರೂ ಸಹ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಅಕ್ರಮ ಗಣಿಗಾರಿಕೆಯೇ ಸ್ಪೋಟಕ್ಕೆ ಮುಖ್ಯ ಕಾರಣವಾಗಿದ್ದು, ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ಸರ್ಕಾರ ಹಾಗು ಅಧಿಕಾರಿಗಳು ವಿಫಲರಾಗಿದ್ದಾರೆಂದು ಆರೋಪಿಸಿದರು.
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಬಡ ಕೂಲಿ ಕಾರ್ಮಿಕರು ಬಲಿಯಾಗುತ್ತಿದ್ದು, ಸ್ಪೋಟ ಪ್ರಕರಣದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ಸರ್ಕಾರ ಕೇವಲ ತಲಾ ರು. ೫ ಲಕ್ಷ ಪರಿಹಾರ ನೀಡುತ್ತಿರುವುದು ಸರಿಯಲ್ಲ. Pರು. ೫ ಲಕ್ಷ ಪರಿಹಾರದಿಂದ ಬಡಕುಟುಂಬಗಳು ನೆಮ್ಮದಿ ಕಾಣಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ತಲಾ ೨೦ ಲಕ್ಷ ಪರಿಹಾರ ನೀಡುವಂತೆ ಹಾಗು ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಡೆದಿರುವ ಸ್ಪೋಟ ಪ್ರಕರಣಗಳನ್ನು ಉನ್ನತಮಟ್ಟದ ತನಿಖೆಗೆ ಒಳಪಡಿಸಿ ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ವಿಫಲರಾಗಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಸ್ ಭೈರಪ್ಪ ನೇತೃತ್ವ ವಹಿಸಿದ್ದರು. ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸುದೀಪ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಜಾರ್ಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ರೂಪ, ಪ್ರಮುಖರಾದ ಪ್ರಾನ್ಸಿಸ್, ಎಚ್.ಎಂ ಮಹಾದೇವಯ್ಯ, ಮುಕುಂದಯ್ಯ, ಜೆಬಿಟಿ ಬಾಬು, ಮುಸ್ವೀರ್ ಬಾಷಾ, ಶೋಭಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment