ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಜೆಡಿಯು ಶಶಿಕುಮಾರ್ ಎಸ್. ಗೌಡ ಮನವಿ
ಮೈಕ್ರೋ ಫೈನಾನ್ಸ್ ಕಂಪನಿಗಳ ವ್ಯಾಪ್ತಿಗೆ ಒಳಪಡುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹೊರತುಪಡಿಸಿ ರಾಜ್ಯದಲ್ಲಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಕಂಪನಿಗಳ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಹಾಗೂ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಅಭಿವೃದ್ಧಿ ಪುನಶ್ಚೇತನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಜನತಾದಳ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ದಾರೆ.
ಭದ್ರಾವತಿ, ಫೆ. ೧೮: ಮೈಕ್ರೋ ಫೈನಾನ್ಸ್ ಕಂಪನಿಗಳ ವ್ಯಾಪ್ತಿಗೆ ಒಳಪಡುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹೊರತುಪಡಿಸಿ ರಾಜ್ಯದಲ್ಲಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಕಂಪನಿಗಳ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಹಾಗೂ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಅಭಿವೃದ್ಧಿ ಪುನಶ್ಚೇತನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಜನತಾದಳ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ದಾರೆ.
ತಾಲೂಕಿನ ಆನವೇರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ರಾಜ್ಯದಲ್ಲಿರುವ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಬಡ ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ ಈ ಕುರಿತು ಹಲವು ಬಾರಿ ಜಿಲ್ಲಾಧಿಕಾರಿಗಳಿಗೆ ಹಾಗು ಲಿಡ್ ಬ್ಯಾಂಕ್ ಮುಖ್ಯಸ್ಥರಿಗೆ ಮನವಿ ಸಲ್ಲಿಸಲಾಗಿದ್ದು, ಆದರೂ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಮೈಕೋ ಫೈನಾನ್ಸ್ ಕಂಪನಿಗಳ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಕೋರಿದ್ದಾರೆ.
ಅವನತಿ ದಾರಿಯಲ್ಲಿ ಸಾಗುತ್ತಿರುವ ನಗರದ ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗು ಕಳೆದ ಸುಮಾರು ೫ ವರ್ಷಗಳಿಂದ ಕಾರ್ಖಾನೆ ಯಂತ್ರಗಳು ಸ್ಥಗಿತಗೊಂಡಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಈ ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವಂತೆ ಮನವಿ ಮಾಡಿದ್ದಾರೆ.
ಸರ್ಕಾರಿ ಆದೇಶದ ಪ್ರಕಾರ ಪ್ರತಿ ತಿಂಗಳು ಸರ್ಕಾರಿ ರಜಾ ದಿನ ಹೊರತುಪಡಿಸಿ ಎಲ್ಲಾ ದಿನ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಬೇಕು. ಆದರೆ ನ್ಯಾಯಬೆಲೆ ಅಂಗಡಿಗಳ ಮಾಲೀಕರು ಕೇವಲ ೫ ರಿಂದ ೬ ದಿನ ಮಾತ್ರ ತೆಗೆಯುತ್ತಿದ್ದಾರೆ. ಸರ್ಕಾರಿ ಆದೇಶ ಪಾಲಿಸುತ್ತಿಲ್ಲ ತಕ್ಷಣ ಕ್ರಮ ಕೈಗೊಳ್ಳುವುದು. ಜಿಲ್ಲೆಯಲ್ಲಿ ವಂಶಪಾರಂಪರ್ಯವಾಗಿ ೨-೩ ತಲೆಮಾರುಗಳಿಂದ ಸರ್ಕಾರದ ಆದೇಶದ ವಿರುದ್ಧವಾಗಿ ನ್ಯಾಯಬೆಲೆ ಅಂಗಡಿಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ತಾಲೂಕಿನಲ್ಲಿ ಸುಮಾರು ೭೦ ನ್ಯಾಯಬೆಲೆ ಅಂಗಡಿಗಳಿದ್ದು, ಈ ಪೈಕಿ ಸುಮಾರು ೨೦ ನ್ಯಾಯಬೆಲೆ ಅಂಗಡಿಗಳಲ್ಲಿ ಆದೇಶ ಉಲ್ಲಂಘಿಸಲಾಗಿದೆ. ಈ ಕುರಿತು ಈಗಾಗಲೇ ಹಲವು ಬಾರಿ ಆಹಾರ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕರಿಗೆ(ಎ.ಡಿ) ಮನವಿ ಸಲ್ಲಿಸಲಾಗಿದೆ. ಆದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಶಿಕುಮಾರ್ ಎಸ್. ಗೌಡ ಆಗ್ರಹಿಸಿದ್ದಾರೆ.
ಸಂಯುಕ್ತ ಜನತಾದಳ ರಾಜ್ಯ ಸಂಘಟನಾ ಕಾರ್ಯದರ್ಶಿ ಬಾಬು ದೀಪಕ್ ಕುಮಾರ್, ಮಹಿಳಾ ಘಟಕದ ರಾಜ್ಯ ಸಂಚಾಲಕಿ ಎಂ.ಡಿ ಕಲಾವತಿ ಹಾಗು ಮುಖಂಡರಾದ ಡಿ.ಕೆ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment