ಸಂಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ್ ಉಪಸ್ಥಿತಿ
ರಾಮ್ ಸೇನಾ ಶ್ರೀ ಲಕ್ಷ್ಮೀನರಸಿಂಹ ಘಟಕದ ಉದ್ಘಾಟನೆ ಭಾನುವಾರ ನಗರದ ಬಿ.ಎಚ್ ರಸ್ತೆ ಕಡದಕಟ್ಟೆ ಐಟಿಐ ಸಮೀಪದ ವಿದ್ಯಾಧಿರಾಜ ಸಭಾಭವನದಲ್ಲಿ ನಡೆಯಿತು. ಈ ಸಂಬಂಧ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ರಾಮ್ ಸೇನಾ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ, ಫೆ. ೨೮: ರಾಮ್ ಸೇನಾ ಶ್ರೀ ಲಕ್ಷ್ಮೀನರಸಿಂಹ ಘಟಕದ ಉದ್ಘಾಟನೆ ಭಾನುವಾರ ನಗರದ ಬಿ.ಎಚ್ ರಸ್ತೆ ಕಡದಕಟ್ಟೆ ಐಟಿಐ ಸಮೀಪದ ವಿದ್ಯಾಧಿರಾಜ ಸಭಾಭವನದಲ್ಲಿ ನಡೆಯಿತು.
ಉದ್ಘಾಟನೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು. ಸುಮಾರು ೫೦ ದಂಪತಿಗಳು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಪ್ರಸಾದ ವಿತರಣೆ ನಡೆಯಿತು.
ರಾಮ್ ಸೇನಾ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ್ ಶ್ರೀ ಲಕ್ಷ್ಮೀನರಸಿಂಹ ನೂತನ ಘಟಕ ಉದ್ಘಾಟಿಸಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಕಾರ್ಯಕರ್ತರನ್ನು ಅಭಿನಂದಿಸುವ ಮೂಲಕ ಸಂಘಟನೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವಂತೆ ಕರೆ ನೀಡಿದರು.
ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಹಾ.ರಾಮಪ್ಪ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ರಾಮ್‌ಸೇನಾ ರಾಜ್ಯ ಕಾರ್ಯದರ್ಶಿಗಳಾದ ಮಂಜುನಾಥ ಗುಲ್ಜಾರ್, ಸಂತೋಷ್‌ಶೆಟ್ಟಿ, ಜಿಲ್ಲಾಧ್ಯಕ್ಷ ಉಮೇಶ್‌ಗೌಡ, ಮುಖಂಡ ಬಾಬು ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರು ಪದಾಧಿಕಾರಿಗಳು:
ಅಧ್ಯಕ್ಷರಾಗಿ ಅವಿನಾಶ್, ಉಪಾಧ್ಯಕ್ಷರಾಗಿ ಪ್ರವೀಣ್‌ಕುಮಾರ್, ರಮೇಶ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಕಾಶ್, ಕಾರ್ತಿಕ್, ಸೋಷಿಯಲ್ ಮೀಡಿಯಾ ಮೇಲ್ವಿಚಾರಕರಾಗಿ ಪವನ್, ವಿದ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್, ರೋಹಿತ್, ಕಾರ್ಯದರ್ಶಿಗಳಾಗಿ ಸುನಿಲ್, ಸಂಜಯ್, ಪ್ರಭಾಕರ್, ಆನಂದ್, ರಿತೀನ, ಅಭಿ, ಲೋಕೇಶ್ ಮತ್ತು ದರ್ಶನ್ ಪದಗ್ರಹಣ ಸ್ವೀಕರಿಸಿದರು.
No comments:
Post a Comment