ಮೊದಲ ಪಂದ್ಯ ಎಂಜೆಎ-ಮಾರುತಿ ಟೈಗರ್‍ಸ್ ತಂಡಗಳ ನಡುವೆ ಸೆಣಸಾಟ
ಬಿ.ವೈ.ಕೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ತಾಲೂಕು ಮಟ್ಟದ ಎರಡು ದಿನಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಶನಿವಾರ ಸಂಜೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಮೊದಲ ಪಂದ್ಯ ಎಂಜೆಎ-ಮಾರುತಿ ಟೈಗರ್‍ಸ್ ತಂಡಗಳ ನಡುವೆ ಸೆಣಸಾಟ ನಡೆಯಿತು.
ಭದ್ರಾವತಿ, ಫೆ. ೨೭: ಬಿ.ವೈ.ಕೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ತಾಲೂಕು ಮಟ್ಟದ ಎರಡು ದಿನಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಶನಿವಾರ ಸಂಜೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
ಪ್ರಪಥಮ ಬಾರಿಗೆ ನಗರದಲ್ಲಿ ನಡೆಯುತ್ತಿರುವ ಮ್ಯಾಟ್ ಒಳಗೊಂಡ ಪ್ರೊ ಕಬಡ್ಡಿ ಪಂದ್ಯಾವಳಿ ಇದಾಗಿದ್ದು, ಮೊದಲ ಪಂದ್ಯ ಮಾರುತಿ ಟೈಗರ್‍ಸ್ ಮತ್ತು ಎಂಜೆಎ ತಂಡಗಳ ನಡುವೆ ಸೆಣಸಾಟ ನಡೆಯಿತು. ಪಂದ್ಯಾವಳಿ ಒಟ್ಟು ೮ ತಂಡಗಳು ಸೆಣಸಾಟ ನಡೆಸಲಿವೆ. ನಗರದ ವಿವಿಧ ಭಾಗಗಳಿಂದ ಪಂದ್ಯಾವಳಿ ವೀಕ್ಷಣೆಗೆ ಕಬಡ್ಡಿ ಅಭಿಮಾನಿಗಳು, ಕ್ರೀಡಾಪಟುಗಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ವೀಕ್ಷಣೆಗೆ ಬೃಹತ್ ಎಲ್‌ಸಿಡಿ ವ್ಯವಸ್ಥೆ ಸಹ ಕಲ್ಪಿಸಲಾಗಿದೆ.
ಉದ್ಘಾಟನಾ ಸಭಾರಂಭದಲ್ಲಿ ವಿವಿಧ ಕಬಡ್ಡಿ ತಂಡಗಳ ಮಾಲೀಕರಾದ ಮಾರುತಿ ಮೆಡಿಕಲ್ ಆನಂದ್, ಬಾಲಕೃಷ್ಣ, ಪೊಲೀಸ್ ಉಮೇಶ್, ಮಂಗೋಟೆ ರುದ್ರೇಶ್, ಮಣಿ ಎಎನ್‌ಎಸ್ ಹಾಗು ಹಿರಿಯ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ, ಕ್ಲಬ್ ಅಧ್ಯಕ್ಷ ಎಚ್.ಎನ್ ಕೃಷ್ಣೇಗೌಡ, ಕಬ್ಲ್ ಪ್ರಧಾನ ಕಾರ್ಯದರ್ಶಿ ಎಚ್.ಆರ್ ರಂಗನಾಥ್, ಕಾರ್ಯದರ್ಶಿ ಮಾರ್ಕಂಡಯ್ಯ, ಖಜಾಂಚಿ ಎಸ್. ವಿಶ್ವನಾಥ್, ಉಪಾಧ್ಯಕ್ಷರಾದ ಚನ್ನಪ್ಪ, ಸಂಚಾಲಕರಾದ ಎಸ್.ಎನ್ ಸಿದ್ದಯ್ಯ, ವೈ. ವಸಂತಕುಮಾರ್, ಜಯರಾಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment