ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್
ಭದ್ರಾವತಿ, ಫೆ. ೨೬: ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಮುಖ ಪಾತ್ರವಹಿಸಿದ್ದು, ಅಲ್ಲದೆ ನಾಡಿನ ಎಲ್ಲಾ ಧರ್ಮ, ಜಾತಿ, ಜನಾಂಗಗಳ ಏಳಿಗಾಗಿ ಶ್ರಮಿಸುವ ಜೊತೆಗೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಮೇಲಿನ ಅಭಿಮಾನದ ಹಿನ್ನಲೆಯಲ್ಲಿ ಅವರನ್ನು ವಿಶೇಷವಾಗಿ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿನಂದಿಸಲು ಜಿಲ್ಲೆಯ ಎಲ್ಲಾ ತಾಲೂಕಿನ ಸಮಸ್ತ ಅಭಿಮಾನ ಬಳಗ ಮುಂದಾಗಿದೆ ಎಂದು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್ ತಿಳಿಸಿದರು.
ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೆ.೨೮ ಹಾಗು ಮಾ.೧ರಂದು ಶಿವಮೊಗ್ಗ ವಿನೋಬನಗರದ ಹಳೇ ಜೈಲು ಆವರಣದಲ್ಲಿ ಜಿಲ್ಲೆಯ ಸಮಸ್ತ ನಾಗರೀಕರ ಪರವಾಗಿ 'ನಮ್ಮೊಲುಮೆ.. ಅಭಿಮಾನದ ಅಭಿನಂದನೆ' ಭಾವಾಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಕ್ಷೇತ್ರದ ಸಮಸ್ತ ನಾಗರೀಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಹುಟ್ಟುಹಬ್ಬ ವಿಶೇಷವಾಗಿ ಆಚರಣೆ :
ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್ ಮಾತನಾಡಿ, ನಗರದಲ್ಲಿ ಬಿ.ವೈ.ರಾಘವೇಂದ್ರ ಹಾಗೂ ಬಿ.ಎಸ್ ಯಡಿಯೂರಪ್ಪ ಅಭಿಮಾನಿ ಬಳಗದ ವತಿಯಿಂದ ಕಳೆದ ೧೩ ವರ್ಷಗಳಿಂದಲೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರು ಮತ್ತು ಸಂಸದ ಬಿ.ವೈ ರಾಘವೇಂದ್ರರವರ ಹುಟ್ಟುಹಬ್ಬ ವಿಶೇಷವಾಗಿ ಅಚರಿಸಿಕೊಂಡು ಬರಲಾಗುತ್ತಿದೆ. ರಕ್ತದಾನ ಶಿಬಿರ, ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ನೋಟ್ ಪುಸ್ತಕ ವಿತರಣೆ, ರೈತರಿಗೆ ತೆಂಗಿನ ಸಸಿ ವಿತರಣೆ, ಹಳೇನಗರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಾಲು, ಹಣ್ಣು ಬ್ರೆಡ್ ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಸೂಡಾ ಸದಸ್ಯರಾದ ವಿ. ಕದಿರೇಶ್, ರಾಮಲಿಂಗಯ್ಯ, ಹಟ್ಟಿಚಿನ್ನದ ಗಣಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಟಿ.ಎಸ್ ದುಗ್ಗೇಶ್, ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರಗಳ ರಾಜ್ಯ ಸಂಯೋಜಕ ಪ್ರಭಾಕರ ಬೀರಯ್ಯ, ಪಕ್ಷದ ಪ್ರಮುಖರಾದ ಜಿ. ಆನಂದಕುಮಾರ್, ಕೃಷ್ಣ ಛಲವಾದಿ, ಅವಿನಾಶ್, ವಿವಿಧ ಸಮಾಜಗಳ ಮುಖಂಡರಾದ ಆರ್. ಮಹೇಶ್‌ಕುಮಾರ್, ಎಸ್. ಮಂಜುನಾಥ್, ಡಿ.ಕೆ ರಾಘವೇಂದ್ರರಾವ್, ಎ.ಟಿ ರವಿ, ವೀರಭದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment