ಉಮಾದೇವಿ
ಭದ್ರಾವತಿ, ಜ. ೪: ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ರಸ್ತೆ ನಿವಾಸಿ, ಮಾಜಿ ಪುರಸಭಾ ಸದಸ್ಯೆ ಉಮಾದೇವಿ(೭೯) ಗುರುವಾರ ನಿಧನ ಹೊಂದಿದರು.
ಉಮಾದೇವಿಯವರು ಜನಸಂಘದ ಕಾರ್ಯಕರ್ತರು, ಬಿಜೆಪಿ ಪಕ್ಷದ ಹಿರಿಯ ಮುಖಂಡ ಬಿ.ಎಚ್ ರುದ್ರಪ್ಪನವರ ಪತ್ನಿಯಾಗಿದ್ದು, ಪತಿ ಹಾಗು ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳನ್ನು ಬಿಟ್ಟಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಫೆ.೫ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.
ಮೃತರ ನಿಧನಕ್ಕೆ ಪುರಸಭೆ ಮಾಜಿ ಉಪಾಧ್ಯಕ್ಷ ಟಿ. ವೆಂಕಟೇಶ್, ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ನರಸಿಂಹಚಾರ್, ಬಿಜೆಪಿ ಮಂಡಲ ಕಾರ್ಯದರ್ಶಿ ಚನ್ನೇಶ್ ಹಾಗು ಪಕ್ಷದ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
No comments:
Post a Comment