ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಕನಸು ನನಸಾಗಿದ್ದು, ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.
ಭದ್ರಾವತಿ, ಫೆ. ೨: ತಾಲೂಕಿನ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಕನಸು ನನಸಾಗಿದ್ದು, ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.
ನಗರ ಪ್ರದೇಶದಿಂದ ೧೫ ಕಿ.ಮೀ ದೂರದಲ್ಲಿರುವ ಗ್ರಾಮೀಣ ಪ್ರದೇಶವಾದ ಕಲ್ಪನಹಳ್ಳಿ ಗ್ರಾಮಸ್ಥರು ಅನೇಕ ಬಾರಿ ಕೆಎಸ್‌ಆರ್‌ಟಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸ್ಥಳೀಯ ಜನಪ್ರತಿನಿಧಿಗಳಿಗೆ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು. ಕಳೆದ ೪ ದಿನಗಳ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಸಭೆಯಲ್ಲಿ ಗ್ರಾಮಾಂತರ ಹಾಗು ನಗರ ವ್ಯಾಪ್ತಿಯಲ್ಲಿ ಬಸ್ ಸಂಚಾರ ಸಮರ್ಪಕವಾಗಿ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ ಘಟಕದ ಅಧಿಕಾರಿಗಳಿಗೆ ಸೂಚಿಸಿದ್ದರು.
ಈ ಹಿನ್ನಲೆಯಲ್ಲಿ ಇದೀಗ ಕಲ್ಪನಹಳ್ಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಗ್ರಾಮದ ಯುವ ಮುಖಂಡ ಪ್ರವೀಣ್ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment