ಭದ್ರಾವತಿ ಸಿಂಗನಮನೆ ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿಗ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸನ್ಮಾನಿಸಿ ಅಭಿನಂದಿಸಿದರು.
ಭದ್ರಾವತಿ, ಫೆ. ೧೧: ತಾಲೂಕಿನ ೧೫ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಗುರುವಾರ ಮತ್ತು ಶುಕ್ರವಾರ ನಡೆಯಿತು. ಕೆಲವು ಕಡೆ ಅವಿರೋಧ ಆಯ್ಕೆ ನಡೆದರೆ, ಮತ್ತೆ ಕೆಲವೆಡೆ ಚುನಾವಣೆ ನಡೆಯಿತು.
ದಾಸರ ಕಲ್ಲಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೦ ಸದಸ್ಯರಿದ್ದು, 'ಬಿ' ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಎ.ಜಿ ಮಲ್ಲನಗೌಡ ಹಾಗು 'ಎ' ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ನೀಲಮ್ಮ ಆಯ್ಕೆಯಾಗಿದ್ದಾರೆ. ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳೂ ಬಿಜೆಪಿ ಬೆಂಬಲಿಗರ ಪಾಲಾಗಿವೆ.
ಕಲ್ಲಿಹಾಳ್ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೦ ಸದಸ್ಯರಿದ್ದು, ಸಾಮಾನ್ಯ ಸ್ಥಾನಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ್ ಕುಮಾರ್ ಎ.ಜಿ ಹಾಗು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ರಮ್ಯ ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳೂ ಬಿಜೆಪಿ ಬೆಂಬಲಿಗರ ಪಾಲಾಗಿವೆ.
ಕಾರೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೧ ಸದಸ್ಯರಿದ್ದು, ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಜಿ. ಮಮತ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಪಾರ್ವತಮ್ಮ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಿ. ನಟರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಮೈದೊಳಲು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೩ ಸದಸ್ಯರಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ರೇಣುಕಾಬಾಯಿ ಹಾಗು ಪರಿಶಿಷ್ಟ ಜಾತಿಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಎಸ್ ಲಕ್ಷ್ಮೀಕಾಂತ ಆಯ್ಕೆಯಾಗಿದ್ದಾರೆ. ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಕೆ. ಬಸವರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳೂ ಬಿಜೆಪಿ ಬೆಂಬಲಿಗರ ಪಾಲಾಗಿವೆ.
ನಿಂಬೆಗೊಂದಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೯ ಸದಸ್ಯರಿದ್ದು, ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಶಾಲಿನಿ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಎಂ. ಮಹಾದೇವಪ್ಪ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳೂ ಬಿಜೆಪಿ ಬೆಂಬಲಿಗರ ಪಾಲಾಗಿವೆ.
ತಾಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೯ ಸದಸ್ಯರಿದ್ದು, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕೋಮಲ ಹಾಗು 'ಎ' ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ರುದ್ರೇಶ್ ಆಯ್ಕೆಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಹಾಗು ಉಪಾಧ್ಯಕ್ಷ ಎರಡೂ ಸ್ಥಾನಗಳೂ ಕಾಂಗ್ರೆಸ್ ಬೆಂಬಲಿಗರ ಪಾಲಾಗಿವೆ.
ನಾಗತಿಬೆಳಗಲು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೧ ಜನ ಸದಸ್ಯರಿದ್ದು, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಗೀತಾ ಬಾಯಿ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ವೇಲುಸ್ವಾಮಿ ಆಯ್ಕೆಯಾಗಿದ್ದಾರೆ. ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಎರಡೂ ಸ್ಥಾನಗಳೂ ಜೆಡಿಎಸ್ ಬೆಂಬಲಿಗರ ಪಾಲಾಗಿವೆ.
ಕಾಗೇಕೋಡಮಗ್ಗೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೨ ಸದಸ್ಯರಿದ್ದು, 'ಎ' ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಟಿ.ಎನ್ ಶಕೀಲಾಬಾನು ಹಾಗು 'ಬಿ' ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಶಬ್ನಂಬಾನು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಹಾಗು ಉಪಾಧ್ಯಕ್ಷ ಸ್ಥಾನ ಜೆಡಿಎಸ್ ಬೆಂಬಲಿರ ಪಾಲಾಗಿವೆ.
ಅಂತರಗಂಗೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೫ ಸದಸ್ಯರಿದ್ದು, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸವಿತ ಹಾಗು 'ಎ' ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಆರ್ ಶೋಭ ಆಯ್ಕೆಯಾಗಿದ್ದಾರೆ. ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಕಾಂತರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಯರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೩ ಸದಸ್ಯರಿದ್ದು, 'ಎ' ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಎಂ. ಶ್ವೇತ ಹಾಗು ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಶಾಂತಬಾಯಿ ಆಯ್ಕೆಯಾಗಿದ್ದಾರೆ. ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಕಾಂತರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲೂ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಬೆಂಬಲಿಗರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಂಗನಮನೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೨೧ ಸದಸ್ಯರಿದ್ದು, ಪರಿಶಿಷ್ಟ ಜಾತಿಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಆರ್. ಈಶ್ವರ್ ಹಾಗು ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಕವಿತಾ ಆಯ್ಕೆಯಾಗಿದ್ದಾರೆ. ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಕೆ. ಬಸವರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಹಾಗು ಉಪಾಧ್ಯಕ್ಷ ಎರಡೂ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರ ಪಾಲಾಗಿವೆ. ಆರ್. ಈಶ್ವರ್ ಮೂಲತಃ ಜೆಡಿಎಸ್ ಬೆಂಬಲಿಗರಾಗಿದ್ದು, ಎರಡು ಬಾರಿ ಸದಸ್ಯರಾಗಿದ್ದಾರೆ. ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೩ ಸದಸ್ಯರಿದ್ದು, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಮಲಕ್ ಬಿ. ವೀರಪ್ಪನ್ ಹಾಗು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಕುಬೇರ ನಾಯ್ಕ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಪಂಚಾಯಿತಿಯಲ್ಲಿ ಅಧ್ಯಕ್ಷ ಹಾಗು ಉಪಾಧ್ಯಕ್ಷ ಎರಡೂ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರ ಪಾಲಾಗಿವೆ. ಕುಬೇರ ನಾಯ್ಕ ೩ ಬಾರಿ ಸದಸ್ಯರಾಗಿದ್ದು, ಈ ಹಿಂದೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಆನವೇರಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೧ ಸದಸ್ಯರಿದ್ದು, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸುಜಾತ ಬಿ.ಆರ್ ಗಿರೀಶ್ ಹಾಗು 'ಎ' ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಪಿ ತೇಜಾವತಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಅರಹತೊಳಲು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೯ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಆರ್. ಪ್ರಭಾಕರ್ ಹಾಗು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಶಶಿಕಲಾ ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಅರಬಿಳಚಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಎಚ್.ಬಿ ಕಿರಣ್ ಹಾಗು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಬಿ ಆಯಿಷಾ ಆಯ್ಕೆಯಾಗಿದ್ದಾರೆ. ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
No comments:
Post a Comment