ಭದ್ರಾವತಿ, ಫೆ. ೧೭: ಹಿರಿಯೂರು ಡಾ. ಬಿ.ಆರ್ ಅಂಬೇಡ್ಕರ್ ಕಾಲೋನಿಯಲ್ಲಿರುವ ಶ್ರೀ ಮಾತಂಗಮ್ಮ ದೇವಿ ಮತ್ತು ಶ್ರೀ ದುರ್ಗಮ್ಮ ದೇವಿ ಹಾಗು ಶ್ರೀ ಕಲುಬೆ ರಂಗನಾಥಸ್ವಾಮಿ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಾತಂಗಮ್ಮ ದೇವಿಯ ಉತ್ಸವ ಮೂರ್ತಿಗೆ ಕಲಾಹೋಮ ಮತ್ತು ಕುಂಬಾಭಿಷೇಕ ಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಹಿರಿಯೂರು ಶ್ರೀ ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ ಮತ್ತು ಚಿತ್ರದುರ್ಗ ಆದಿಜಾಂಬವ ಮಠದ ಶ್ರೀ ಷಡಕ್ಷರ ಮುನಿ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಶ್ರೀ ಮಾತಂಗಮ್ಮ ದೇವಿಯ ಉತ್ಸವ ಮೂರ್ತಿಗೆ ಕಲಾಹೋಮ ಮತ್ತು ಕುಂಬಾಭಿಷೇಕ ಮಹೋತ್ಸವ ಯಶಸ್ವಿಯಾಗಿ ಜರುಗಲು ಕಾರಣಕರ್ತರಾದ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾಕರ್ತರು ಹಾಗು ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.
ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್, ಪ್ರಮುಖರಾದ ಬಾರಂದೂರು ರಂಗಪ್ಪ, ಕೃಷ್ಣಪ್ಪ ವೀರಾಪುರ, ಕೃಷ್ಣ, ಗವಿಸಿದ್ದಪ್ಪ, ಪ್ರಭಾಕರ್, ಮಹೇಶ್, ಹರೀಶ್, ಸಂಪತ್‌ಕುಮಾರ್, ಕೃಷ್ಣ, ಶಿವು, ಸಿದ್ದಪ್ಪ, ಸುನಿಲ್, ಅಣ್ಣಪ್ಪ, ಮಂಜುನಾಥ್ ಸೇರದಿಂತೆ ಇನ್ನಿತರರು ಉಪಸ್ಥಿತರಿದ್ದರು.
ಚಿತ್ರ: ಡಿ೧೭-ಬಿಡಿವಿಟಿ೩
ಹಿರಿಯೂರು ಡಾ. ಬಿ.ಆರ್ ಅಂಬೇಡ್ಕರ್ ಕಾಲೋನಿಯಲ್ಲಿರುವ ಶ್ರೀ ಮಾತಂಗಮ್ಮ ದೇವಿ ಮತ್ತು ಶ್ರೀ ದುರ್ಗಮ್ಮ ದೇವಿ ಹಾಗು ಶ್ರೀ ಕಲುಬೆ ರಂಗನಾಥಸ್ವಾಮಿ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಾತಂಗಮ್ಮ ದೇವಿಯ ಉತ್ಸವ ಮೂರ್ತಿಗೆ ಕಲಾಹೋಮ ಮತ್ತು ಕುಂಬಾಭಿಷೇಕ ಮಹೋತ್ಸವ ಧಾರ್ಮಿಕ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
No comments:
Post a Comment