Monday, February 15, 2021

೨ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಭದ್ರಾವತಿ, ಫೆ. ೧೫: ತಾಲೂಕಿನ ೨ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.
    ತಾಲೂಕಿನ ಗುಡುಮಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೮ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಎಚ್.ಆರ್ ಪುಟ್ಟಪ್ಪ, ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಪುಷ್ಪ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
    ತಾಲೂಕಿನ ಆಗರದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೪ ಜನ ಸದಸ್ಯರಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸಿದ್ದಪ್ಪ ಹಾಗು ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಮಂಜುಳ  ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

No comments:

Post a Comment