Sunday, February 14, 2021

ವಿವಿಧೆಡೆ ಅಂಗಡಿಮುಂಗಟ್ಟು ಮೇಲೆ ದಾಳಿ : ೧೫೨೦ ರು. ದಂಡ ವಸೂಲಾತಿ

ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಭದ್ರಾವತಿ ತಾಲೂಕಿನ ಸೀಗೆಬಾಗಿ, ಭದ್ರಾ ಕಾಲೋನಿ ಮತ್ತು ವೀರಾಪುರ ವ್ಯಾಪ್ತಿಯ ವಿವಿಧೆಡೆ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು.
   ಭದ್ರಾವತಿ, ಫೆ. ೧೪: ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಾಲೂಕಿನ ಸೀಗೆಬಾಗಿ, ಭದ್ರಾ ಕಾಲೋನಿ ಮತ್ತು ವೀರಾಪುರ ವ್ಯಾಪ್ತಿಯ ವಿವಿಧೆಡೆ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ೧೫೨೦ ರು. ದಂಡ ವಸೂಲಾತಿ ಮಾಡಲಾಗಿದೆ.
   ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ಅಲ್ಲದೆ ತಂಬಾಕು ಉತ್ಪನ್ನಗಳ ಕುರಿತು ಅಂಗಡಿಮುಂಗಟ್ಟುಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
   ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್,   ಹಿರಿಯ ಆರೋಗ್ಯ ಸಹಾಯಕರಾದ ಆನಂದಮೂರ್ತಿ ಮತ್ತು ಹಾಲಸ್ವಾಮಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್, ರವಿರಾಜ್, ಕಿರಿಯ ಆರೋಗ್ಯ ಸಹಾಯಕರಾದ ಮನೋಹರ್, ಚೇತನ್ ಹಾಗೂ ಉಷಾ ಸೇರಿದಂತೆ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.  

No comments:

Post a Comment