ಭದ್ರಾವತಿ, ಫೆ. ೧೭: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಫೆ.೨೦ ರಂದು ಬೆಳಿಗ್ಗೆ ೧೦ ಗಂಟೆಗೆ ನಗರ ಹಾಗು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕರ್ತರು, ರೈತರು, ಕಾರ್ಮಿಕರು, ಮಹಿಳಾ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು, ವರ್ತಕರು, ವ್ಯಾಪಾರಸ್ಥರು, ಯುವ ಸಮುದಾಯದವರು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment